ಬೆಂಗಳೂರು: ಎಂಜಿನಿಯರಿಂಗ್ ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (Tehri Hydro Development Corporation India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (THDC Recruitment 2024). ಖಾಲಿ ಇರುವ 100 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಎಂಜಿನಿಯರಿಂಗ್ ಪದವಿ ಪಡೆದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 29(Job Alert).
ಹುದ್ದೆಗಳ ವಿವರ
ಎಂಜಿನಿಯರಿಂಗ್ ಟ್ರೈನಿ-ಸಿವಿಲ್: 40, ಎಂಜಿನಿಯರಿಂಗ್ ಟ್ರೈನಿ-ಎಲೆಕ್ಟ್ರಿಕಲ್: 25, ಎಂಜಿನಿಯರಿಂಗ್ ಟ್ರೈನಿ-ಮೆಕ್ಯಾನಿಕಲ್: 30 ಮತ್ತು ಎಂಜಿನಿಯರಿಂಗ್ ಟ್ರೈನಿ-ಎಲೆಕ್ಟ್ರಾನಿಕ್ಸ್: 5 ಹುದ್ದೆಗಳಿವೆ.
ವಿದ್ಯಾರ್ಹತೆ ಮತ್ತು ವಯೋಮಿತಿ
ಆಸಕ್ತ ಅಭ್ಯರ್ಥಿಗಳು ಸಂಬಂಧಿತ ವಿಷಯಗಳಲ್ಲಿ ಬಿ.ಇ. / ಬಿ.ಟೆಕ್. ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.
ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ / ಮಾಜಿ ಸೈನಿಕ / ಡಿಪಾರ್ಟ್‌ಮೆಂಟಲ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಇಡಬ್ಲ್ಯುಎಸ್ / ಒಬಿಸಿ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
GATE 2023ರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಗ್ರೂಪ್ ಡಿಸ್ಕಷನ್, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವವರಿಗೆ 50,000 ರೂ. – 1,60,000 ರೂ. ಮಾಸಿಕ ವೇತನ ಲಭ್ಯ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ನೀಡಲಾಗುವುದು. ಅದಾದ ಬಳಿಕ ಉದ್ಯೋಗದ ಸ್ಥಳ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
THDC Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ವಿಳಾಸ https://www.thdc.co.in/ಕ್ಕೆ ಭೇಟಿ ನೀಡಿ.
- Careers ಆಯ್ಕೆ ಕ್ಲಿಕ್ ಮಾಡಿ New Openings ಸೆಲೆಕ್ಟ್ ಮಾಡಿ ಬಳಿಕ Apply Online ಅನ್ನು ಆಯ್ಕೆ ಮಾಡಿ.
- ನಿಮ್ಮ ಅಧಿಕೃತ ಇಮೇಲ್ ಐಡಿ, ಫೋನ್ ನಂಬರ್ ನೀಡಿ ಹೆಸರು ನೋಂದಾಯಿಸಿ.
- ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯವಾದ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂನ ಪ್ರಿಂಟ್ಔಟ್ ತೆಗೆದಿಡಿ.
ಇದನ್ನೂ ಓದಿ: Job Alert: ಗುಡ್‌ನ್ಯೂಸ್: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಕೆ ಆರಂಭ