Site icon Vistara News

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

job alert

job alert

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ (The Karnataka State Co-Operative Apex Bank Ltd)ದ ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 93 ಬ್ಯಾಂಕ್‌ ಸಹಾಯಕ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ 85, ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ 8 ಹುದ್ದೆಗಳಿವೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇ. 55ರಷ್ಟು ಅಂಕ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಕಂಪ್ಯೂಟರ್‌ ಜ್ಞಾನ ಕಡ್ಡಾಯ

ಅಭ್ಯರ್ಥಿಗಳು ಕನ್ನಡ ಓದುವ ಜತೆಗೆ ಬರೆಯಲು, ಸ್ಪಷ್ಟವಾಗಿ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳುವಂತಿರಬೇಕು. ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಷನ್‌ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-Iರ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. + ಜಿಎಸ್‌ಟಿ, ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 1,000 ರೂ. + ಜಿಎಸ್‌ಟಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅರ್ಜಿ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 28,425 ರೂ.- 87,125 ರೂ. ಮಾಸಿಕ ವೇತನ ಸಿಗಲಿದೆ. ಗಮನಿಸಿ ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೇಲಿಟ್ಟು ಆದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿ ಜತೆಗೆ ಅಪ್‌ಲೋಡ್‌ ಮಾಡಬೇಕು. ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್‌ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಆಗ್ನೇಯ ಮಧ್ಯ ರೈಲ್ವೆಯಿಂದ 733 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ; ಐಟಿಐ ಪಾಸಾದವರು ಅಪ್ಲೈ ಮಾಡಿ

Exit mobile version