ಬೆಂಗಳೂರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ (IIMB Recruitment 2024). ಅನೇಕ ಮ್ಯಾನೇಜರ್- ಸೈಬರ್ ಸೆಕ್ಯುರಿಟಿ & ಕಾಂಪ್ಲಿಯೆನ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ (Job alert).
ವಿದ್ಯಾರ್ಹತೆ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಇನ್ಫಾರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಲ್ಲದೆ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ಸೈಬರ್ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್ ಕ್ಷೇತ್ರದಲ್ಲಿ 8 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯ. ಸೈಬರ್ ಸೆಕ್ಯುರಿಟಿ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವ ಮತ್ತು ಕಾರ್ಯಗತಗೊಳಿಸುವ ಅನುಭವ ಇರಬೇಕು.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 13,20,000 ರೂ. – 14,50,000 ರೂ. ವಾರ್ಷಿಕ ವೇತನ ದೊರೆಯಲಿದೆ.
IIMB Recruitment 2024 ಅಧಿಚೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಇಮೇಲ್ ಐಡಿ, ಫೋನ್ ನಂಬರ್ ನೀಡಿ ಹೆಸರು ನೋಂದಾಯಿಸಿ.
- ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆ ಮತ್ತು ಫೋಟೊ ಅಪ್ಲೋಡ್ ಮಾಡಿ.
- ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲ ಮಾಹಿತಿ ಸರಿಯಾಗಿದ್ದರೆ Submit ಬಟನ್ ಕ್ಲಿಕ್ ಮಾಡಿ.
- ಗಮನಿಸಿ, ಅಪೂರ್ಣ ಅರ್ಜಿಯನ್ನು ರಿಜೆಕ್ಟ್ ಆಗಲಿದೆ. ಹೀಗಾಗಿ ಸರಿಯಾಗಿ ಮಾಹಿತಿ ನೀಡಿ ಅಪ್ಲಿಕೇಷನ್ ಭರ್ತಿ ಮಾಡಿ.
ಇದನ್ನೂ ಓದಿ: Job Alert: ಎಚ್ಎಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ