ನವದೆಹಲಿ: ರೈಲ್ವೆಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಇಲ್ಲಿದೆ. ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) ವಿವಿಧ ಡಿವಿಷನ್‌ಗಳಲ್ಲಿ ಖಾಲಿ ಇರುವ ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅಧಿಸೂಚನೆ ಹೊರಡಿಸಿದೆ (West Central Railway Recruitment 2024-2025). ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಎರಡು ಶೈಕ್ಷಣಿಕ ಹಂತದ ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ. ಒಟ್ಟು 3,015 ಅಪ್ರೆಂಟಿಸ್ ಹುದ್ದೆಗಳಿವೆ. ಆಸಕ್ತರು 2024ರ ಜನವರಿ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (Job Alert).
ಹುದ್ದೆಗಳ ವಿವರ
ಜಬಲ್‌ಪುರ್ ಡಿವಿಷನ್: 1,164, ಭೂಪಾಲ್ ಡಿವಿಷನ್: 603, ಕೊಟಾ ಡಿವಿಷನ್: 853, ಕೋಟಾ ವರ್ಕ್‌ಶಾಪ್ ಡಿವಿಷನ್: 196, ಸಿಆರ್‌ಡಬ್ಲ್ಯುಎಸ್ ಬಿಪಿಎಲ್ ಡಿವಿಷನ್: 170, ಎಚ್‌ಕ್ಯು / ಜಬಲ್‌ಪುರ್ ಡಿವಿಷನ್: 29 ಹುದ್ದೆಗಳಿವೆ.
ವಿದ್ಯಾರ್ಹತೆ ಮತ್ತು ವಯೋಮಿತಿ
ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಜತೆಗೆ ವಿವಿಧ ಟ್ರೇಡ್‌ಗಳಲ್ಲಿ ಐಟಿಐ ಶಿಕ್ಷಣ ಪಡೆದಿರಬೇಕು. ಎನ್‌ಸಿವಿಟಿ / ಎಸ್‌ಸಿವಿಟಿ ಐಟಿಐ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15ರಿಂದ 24 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಬಿಡಿಎಸ್ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯುಡಿ, ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಪಶ್ಚಿಮ ಮಧ್ಯ ರೈಲ್ವೆಯ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳು ಮತ್ತು ಐಟಿಐ / ಟ್ರೇಡ್‌ನಲ್ಲಿ ಗಳಿಸಿದ ಅಂಕಗಳನ್ನು ಗಣನೆಗೆ ತೆಗೆದುಕೊಂಡು ಆಯ್ಕೆ ನಡೆಯಲಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- “Apply online” ಆಯ್ಕೆ ಮೇಲೆ ಕ್ಲಿಕ್ ಮಾಡಿ
- ಹೆಸರು ನೋಂದಾಯಿಸಲು ನಿಮ್ಮ ವೈಯಕ್ತಿಕ ಮಾಹಿತಿ ತುಂಬಿ
- ಈಗ ತಯಾರಾಗುವ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್ವರ್ಡ್ ಅನ್ನು ಬಳಸಿ ಲಾಗಿನ್ ಆಗಿ
- ಶೈಕ್ಷಣಿಕ ಮಾಹಿತಿಯೊಂದಿಗೆ ಅರ್ಜಿ ಭರ್ತಿ ಮಾಡಿ
- ಅಗತ್ಯವಾದ ಡಾಕ್ಯುಮೆಂಟ್, ಫೋಟೊ ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ)
- ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದು ಪರಿಶೀಲಿಸಿ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ www.wcr.indianrailways.gov.in ಪರಿಶೀಲಿಸಿ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ