ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್ ಇಲ್ಲಿದೆ. ಗುಪ್ತಚರ ಇಲಾಖೆ (Intelligence Bureau) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-I, ಸೆಕ್ಯುರಿಟಿ ಅಸಿಸ್ಟೆಂಟ್ ಸೇರಿದಂತೆ ಒಟ್ಟು 660 ಹುದ್ದೆಗಳಿವೆ (Intelligence Bureau Recruitment 2024). ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯದವರೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್‌ಲೈನ್ (ಅಂಚೆ) ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್ 25 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್-I/ ಎಕ್ಸಿಕ್ಯುಟಿವ್- 80 ಹುದ್ದೆ, ವಿದ್ಯಾರ್ಹತೆ: ಪದವಿ
ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್-II/ ಎಕ್ಸಿಕ್ಯುಟಿವ್- 136 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಇಂಟಲಿಜೆನ್ಸ್ ಆಫೀಸರ್-I/ ಎಕ್ಸಿಕ್ಯುಟಿವ್- 120 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಜೂನಿಯರ್ ಇಂಟಲಿಜೆನ್ಸ್ ಆಫೀಸರ್-II/ ಎಕ್ಸಿಕ್ಯುಟಿವ್- 170 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಸೆಕ್ಯುರಿಟಿ ಅಸಿಸ್ಟೆಂಟ್ / ಎಕ್ಸಿಕ್ಯುಟಿವ್- 100 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಜೂನಿಯರ್ ಇಂಟಲಿಜೆನ್ಸ್ ಆಫೀಸರ್-II/ ಟೆಕ್- 8 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ ಆಫೀಸರ್-II/ ಸಿವಿಲ್ ವರ್ಕ್ಸ್- 3 ಹುದ್ದೆ, ವಿದ್ಯಾರ್ಹತೆ: ಬಿ.ಇ, ಬಿ.ಟೆಕ್
ಜೂನಿಯರ್ ಇಂಟಲಿಜೆನ್ಸ್ ಆಫೀಸರ್-I (ಮೋಟರ್ ಟ್ರಾನ್ಸ್‌ಪೋರ್ಟ್)- 22 ಹುದ್ದೆ, ವಿದ್ಯಾರ್ಹತೆ: ಡ್ರೈವಿಂಗ್ ಲೈಸನ್ಸ್
ಹಾಲ್ವಾಯಿ & ಕುಕ್- 10 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ, ಡಿಪ್ಲೋಮಾ
ಕೇರ್ ಟೇಕರ್- 5 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಪರ್ಸನಲ್ ಅಸಿಸ್ಟಂಟ್- 5 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.
ಅರ್ಜಿ ಸಲ್ಲಿಸುವ ವಿಧಾನ
- ಅಪ್ಲಿಕೇಷನ್ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ.
- Notification ಆಯ್ಕೆ ಮೇಲೆ ಕ್ಲಿಕ್ ಮಾಡಿ Vacanvies ಆಪ್ಶನ್ ಸೆಲೆಕ್ಟ್ ಮಾಡಿ.
- ಅಧಿಸೂಚನೆ ಮತ್ತು ಅಪ್ಲಿಕೇಷನ್ ಫಾರಂನ ಪ್ರಿಂಟ್ ಔಟ್ ತೆಗೆಯಿರಿ.
- ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಾದ ದಾಖಲೆಗಳಿಗೆ ಸೆಲ್ಫ್ ಅಟೆಸ್ಟ್ ಮಾಡಿ ಅಟ್ಯಾಚ್ ಮಾಡಿ.
- ಈ ಅಪ್ಲಿಕೇಷನ್ ಅನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ:
Joint Deputy Director/G-3,
Intelligence Bureau, Ministry of Home Affairs, 35 S P Marg,
Bapu Dham, New Delhi-110021.
ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ವೇಳಾಪಟ್ಟಿ