ನವದೆಹಲಿ: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುತ್ತಿರುವ ಯುವ ಜನತೆಗೆ ಉತ್ತಮ ಅವಕಾಶ ಲಭಿಸಿದೆ. ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (Indo-Tibetan Border Police Force ITBP) ಖಾಲಿ ಇರುವ 248 ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್ ಕೋಟಾದಲ್ಲಿ ಈ ನೇಮಕಾತಿ ನಡೆಯಲಿದೆ. ಭಾರತದ ಯಾವ ಭಾಗದಲ್ಲಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 28 (Job Alert).
ವಿದ್ಯಾರ್ಹತೆ
ಅಥ್ಲೆಟಿಕ್ಸ್, ಅಕ್ವಟಿಕ್ಸ್, ಈಕ್ವೆಸ್ಟ್ರಿನ್ (ಅಶ್ವಾರೋಹಿ), ಸ್ಪೋರ್ಟ್ಸ್ ಶೂಟಿಂಗ್, ಬಾಕ್ಸಿಂಗ್, ಫುಟ್‌ಬಾಲ್, ಜಿಮ್ನಾಸ್ಟಿಕ್, ಹಾಕಿ, ವೈಟ್ ಲಿಫ್ಟಿಂಗ್, ವುಶು, ಕಬಡ್ಡಿ, ರೆಸ್ಲಿಂಗ್, ಆರ್ಚರಿ, ಕಯಾಕಿಂಗ್, ರೋಯಿಂಗ್, ಕ್ಯಾನೋಯಿಂಗ್ ಮುಂತಾದ ಕ್ರೀಡೆಗಳಲ್ಲಿ ಸಾಧನೆ ಮಾಡಿದ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿದ ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 23 ವರ್ಷ. ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ /ಒಬಿಸಿ / ಇಡಬ್ಲ್ಯುಎಸ್ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ ಮತ್ತು ವೇತನ
ದೈಹಿಕ ಮಾನದಂಡಗಳ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,700-69,100 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಭರ್ತಿ ಮಾಡುವ ಮೊದಲು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆಯ ದಾಖಲೆ, ರೆಸ್ಯೂಮ್ ಇತ್ಯಾದಿ ಸಿದ್ಧವಾಗಿಡಿ.
- ITBP Constable (General Duty) Recruitment 2023ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಅಗತ್ಯವಾದ ಎಲ್ಲ ಮಾಹಿತಿಗಳನ್ನು ತುಂಬಿ. ಡಾಕ್ಯುಮೆಂಟ್ನ ಸ್ಕ್ಯಾನ್ ಪ್ರತಿ, ನಿಮ್ಮ ಫೋಟೊ (ಅಗತ್ಯವಿದ್ದರೆ ಮಾತ್ರ) ಅಪ್ಲೋಡ್ ಮಾಡಿ
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ)
- ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿದ ಬಳಿಕ ITBP Constable (General Duty) Recruitment 2023ರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು Submit ಬಟನ್ ಕ್ಲಿಕ್ ಮಾಡಿ.
- ಕೊನೆಗೆ ಈ ಅಪ್ಲಿಕೇಶನ್ ಫಾರಂನ ಪ್ರಿಂಟ್ ಔಟ್ ತೆಗೆದಿಡಿ
ಇದನ್ನೂ ಓದಿ: Job Alert: ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯದಲ್ಲಿ 487 ಹುದ್ದೆಗಳಿವೆ!
ಹೆಚ್ಚಿನ ಮಾಹಿತಿ, ಯಾವುದೇ ಪ್ರಶ್ನೆ, ದೂರು ಅಥವಾ ಸ್ಪಷ್ಟೀಕರಣಕ್ಕಾಗಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ: 011-24369482 ಮತ್ತು 24369483ಕ್ಕೆ ಕರೆ ಮಾಡಬಹುದು ಅಥವಾ ಅಧಿಕೃತ ವೆಬ್‌ಸೈಟ್ ವಿಳಾಸ https://recruitment.itbpolice.nic.in/ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ