Site icon Vistara News

Job Alert: ಜಯದೇವ ಹೃದ್ರೋಗ ವಿಜ್ಞಾನ, ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್‌ ನರ್ಸ್‌ ಹುದ್ದೆಗೆ ಅರ್ಜಿ ಆಹ್ವಾನ

nurse

nurse

ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ 100 ಸ್ಟಾಫ್‌ ನರ್ಸ್‌ (ಶುಶ್ರೂಷಾಧಿಕಾರಿ) ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Job Alert). ಉಳಿಕೆ ಮೂಲ ವೃಂದ 92 ಮತ್ತು ಕಲ್ಯಾಣ ಕರ್ನಾಟಕ ವೃಂದ 8 ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್‌ 2. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ವೆಬ್‌ಸೈಟ್‌ ವಿಳಾಸ: http://kea.kar.nic.in ಗಮನಿಸಿ.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ನರ್ಸಿಂಗ್ ಕೌನ್ಸಿಲ್‌ ನಿಂದ ಮಾನ್ಯತೆ ಪಡೆದ ಪ್ರಮಾಣಪತ್ರದ ಹೊಂದಿದ ನರ್ಸ್‌ ಆಗಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು  35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಅದರಂತೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು.  ಪರಿಶಿಷ್ಟ ಜಾತಿ/ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಗಮನಿಸಿ ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್‌ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. ಪಾವತಿಸಿದ ಅರ್ಜಿಗಳನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಪರೀಕ್ಷಾ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುವುದು. ಬೆಂಗಳೂರು ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದೆ. 100 ಅಂಕಗಳ ಪರೀಕೆ ಎರಡು ಭಾಗಗಳಲ್ಲಿ ನಡೆಯಲಿದೆ. ಭಾಗ-1ರಲ್ಲಿ 20 ಅಂಕಗಳ ಸಾಮಾನ್ಯ ಇಂಗ್ಲೀಷ್‌, ಸಾಮಾನ್ಯ ಜ್ಞಾನ, ತಾರ್ಕಿಕ ಮತ್ತು ಮಾನಸಿಕ ಸಾಮರ್ಥ್ಯ ಮತ್ತು ಕಂಪ್ಯೂಟರ್‌ ಜ್ಞಾನದ ಪ್ರಶ್ನೆಗಳಿದ್ದರೆ ಭಾಗ-2ರಲ್ಲಿ 80 ಅಂಕಗಳ ಬಿ.ಎಸ್‌.ಸಿ. ನರ್ಸಿಂಗ್‌/ಜಿಎನ್‌ಎಂ ಪ್ರಶ್ನೆಗಳಿರುತ್ತವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳುವ ಮಾಹಿತಿಯನ್ನು ಬಳಿಕ ಪ್ರಕಟಿಸಲಾಗುವುದು.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಇತ್ತೀಚಿನ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರವನ್ನು ಮತ್ತು ಸಹಿಯನ್ನು ಕಪ್ಪು ಶಾಯಿಯ ಸ್ಕೆಚ್‌/ಮಾರ್ಕರ್‌ ಪೆನ್‌ನಲ್ಲಿ ಮಾಡಿ ನಿಗದಿಪಡಿಸಿದ ಅಳತೆಯಲ್ಲಿ ಸ್ಕ್ಯಾನ್‌ ಮಾಡಿ ಅಪ್‌ಲೋಡ್‌ ಮಾಡಬೇಕು. ಆಧಾರ್‌ ಕಾರ್ಡ್‌, ವಿದ್ಯಾರ್ಹತೆಯ ಸರ್ಟಿಫಿಕೇಟ್‌, ಜನ್ಮದಿನಾಂಕ ನಮೂದಿಸಿದ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣಪತ್ರ, ಮೀಸಲಾತಿ ಇರುವವರು ಆ ಕುರಿತ ಸರ್ಟಿಫಿಕೆಟ್‌ ಹೊಂದಿರಬೇಕು. ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿ ನಮೂನೆ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ನೇಮಕಾತಿ ಮುಗಿಯುವವರೆಗೆ ತಮ್ಮ ಬಳಿ ಇಟ್ಟುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: JOB NEWS : ಆರು ತಿಂಗಳಲ್ಲಿ ಸರ್ಕಾರಿ ಇಲಾಖೆಗಳ ಎಲ್ಲಾ ಬ್ಯಾಕ್‌ ಲಾಗ್‌ ಹುದ್ದೆ ಭರ್ತಿಗೆ ಹೈಕೋರ್ಟ್‌ ಆದೇಶ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-23460460 ಸಂಪರ್ಕಿಸಿ.

ಇನ್ನಷ್ಟು ಉದ್ಯೋಗ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Exit mobile version