Site icon Vistara News

Job Alert: ಕರ್ನಾಟಕ ವಿದ್ಯುತ್‌ ನಿಗಮದಲ್ಲಿದೆ 622 ಉದ್ಯೋಗ; ಬಿಎಂಟಿಸಿಯಲ್ಲಿದೆ 2503 ಹುದ್ದೆ!

Karnataka Power Corporation Limited

ಬೆಂಗಳೂರು: ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತವೊಂದರಲ್ಲೇ (Karnataka Power Corporation Limited) ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ಹುದ್ದೆಗಳಿಗೆ (Group B and Group C posts) ಸಂಬಂಧಪಟ್ಟಂತೆ‌ ಒಟ್ಟು 622 ಉದ್ಯೋಗಗಳು ಖಾಲಿ ಇವೆ. ಇನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (Bangalore Metropolitan Transport Corporation – ಬಿಎಂಟಿಸಿ) 2503 ಗ್ರೂಪ್‌ ಸಿ ಹುದ್ದೆಗಳು ಖಾಲಿ (Job Alert) ಇವೆ ಎಂಬ ಮಾಹಿತಿಯನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ (Higher Education Minister Dr MC Sudhakar) ನೀಡಿದ್ದಾರೆ.

ಶಿಕ್ಷಕರ ಕ್ಷೇತ್ರದ ಪರಿಷತ್‌ ಸದಸ್ಯ ಶಶಿಲ್‌ ನಮೋಶಿ ಕೇಳಿದ್ದ ಪ್ರಶ್ನೆ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ. ಎಂ.ಸಿ. ಸುಧಾಕರ್‌, ಈ ಉತ್ತರವನ್ನು ನೀಡಿದ್ದಾರೆ.

ಇದನ್ನೂ ಓದಿ: Aadhaar update: ಆಧಾರ್‌ ಕಾರ್ಡ್‌ ಉಚಿತ ಅಪ್ಡೇಟ್‌ಗೆ ಎರಡೇ ದಿನ ಬಾಕಿ; ನವೀಕರಣವೂ ಸುಲಭ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಯಾವ ಯಾವ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಶಶಿಲ್‌ ನಮೋಶಿಯವರು ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವ ಡಾ. ಎಂ.ಸಿ. ಸುಧಾಕರ್‌, ನಿಗಮ-ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ನಿಗಮ-ಮಂಡಳಿ ಹಾಗೂ ವಿಶ್ವವಿದ್ಯಾಲಯಗಳ ಖಾಲಿ ಹುದ್ದೆಗಳ ವಿವರ

ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ

ಕರ್ನಾಟಕ ವಿದ್ಯುತ್‌ ನಿಗಮ – ನಿಯಮಿತ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ

Job Alert: 10ನೇ ತರಗತಿ ಪಾಸಾದವರಿಗೆ ಉತ್ತಮ ಅವಕಾಶ; ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಕೆಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (The Staff Selection Commission-SSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC GD Vacancy 2023). ಜನರಲ್ ಡ್ಯೂಟಿ ಅಡಿಯಲ್ಲಿ ಪುರುಷ ಮತ್ತು ಮಹಿಳಾ ಕಾನ್ಸ್‌ಟೇಬಲ್‌ಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಭಾರತಾದ್ಯಂತ ಸುಮಾರು 26,146 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಡಿಸೆಂಬರ್‌ 31 (Job Alert).

ಹುದ್ದೆಗಳ ವಿವರ

ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (ಬಿಎಸ್‌ಎಫ್‌)- 6,174, ಸೆಂಟ್ರಲ್‌ ಇಂಡಸ್ಟ್ರಿಯಲ್‌ ಸೆಕ್ಯುರಿಟಿ ಫೋರ್ಸ್‌ (ಸಿಐಎಸ್‌ಎಫ್‌)-11,025, ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (ಸಿಆರ್‌ಪಿಎಫ್‌)-3,337, ಸಶಸ್ತ್ರ ಸೀಮ ಬಲ್‌ (ಎಸ್‌ಎಸ್‌ಬಿ)- 635, ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ)-3,189, ರೈಫಲ್‌ಮ್ಯಾನ್‌ ಇನ್‌ ಅಸ್ಸಾಂ ರೈಫಲ್ಸ್‌ (ಎಆರ್‌)-1,490 ಮತ್ತು ಸೆಕ್ರಟರಿಯೇಟ್‌ ಸೆಕ್ಯುರಿಟಿ ಫೋರ್ಸ್‌ (ಎಸ್‌ಎಸ್‌ಎಫ್‌)-296 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 18ರಿಂದ 23 ವರ್ಷದೊಳಗಿರುವವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ದೈಹಿಕ ಕ್ಷಮತಾ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಜನರಲ್‌ ಇಂಟೆಲಿಜೆನ್ಸ್‌ ಮತ್ತು ರೀಸನಿಂಗ್‌, ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಅರಿವು, ಪ್ರಾಥಮಿಕ ಗಣಿತ ಮತ್ತು ಇಂಗ್ಲಿಷ್‌ / ಹಿಂದಿ ವಿಷಯಗಳ ತಲಾ 20 ಅಂಕಗಳ ಪ್ರಶ್ನೆಗಳಿರುತ್ತವೆ. ಗಮನಿಸಿ ನೀವು ಕನ್ನಡದಲ್ಲಿ ಬೇಕಾದರೂ ಪರೀಕ್ಷೆ ಬರೆಯಬಹುದು. ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ಲಭ್ಯ. ಆಯ್ಕೆಯಾದವರಿಗೆ 21,700 ರೂ.-69,100 ರೂ. ಮಾಸಿಕ ವೇತನ ದೊರೆಯಲಿದೆ.

ದೈಹಿಕ ಅರ್ಹತೆ

ಅಭ್ಯರ್ಥಿಗಳಿಗೆ ಶಾರೀರಿಕ ಮಾನದಂಡಗಳನ್ನು ನಿಗದಿಪಡಿಸಲಾಗಿರುತ್ತದೆ. ಪುರುಷ ಅಭ್ಯರ್ಥಿಗಳು ಕನಿಷ್ಠ 170 ಸೆಂ.ಮೀ. ಎತ್ತರವಿರಬೇಕು, ಸಾಮಾನ್ಯ ಸ್ಥಿತಿಯಲ್ಲಿ ಕನಿಷ್ಠ 80 ಸೆಂ.ಮೀ. ಎದೆ ಸುತ್ತಳಗೆ ಹೊಂದಿರಬೇಕು. ಎದೆಯ ಕನಿಷ್ಠ ಹಿಗ್ಗುವಿಕೆ 5 ಸೆಂ.ಮೀ. ಇರಬೇಕು. ಮಹಿಳಾ ಅಭ್ಯರ್ಥಿಗಳು ಕನಿಷ್ಠ 157 ಸೆಂ.ಮೀ ಎತ್ತರವಿರಬೇಕು. ಎತ್ತರಕ್ಕೆ ತಕ್ಕ ತೂಕವನ್ನು ಪುರುಷ ಅಭ್ಯರ್ಥಿಗಳು ಹೊಂದಿರಬೇಕು.

ಪರೀಕ್ಷಾ ಕೇಂದ್ರ ಮತ್ತು ಅರ್ಜಿ ಶುಲ್ಕ

ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಗಳಲ್ಲಿ ಪರೀಕ್ಷಾ ಕೇಂದ್ರವಿದೆ. ಸಾಮಾನ್ಯ ಅಭ್ಯರ್ಥಿಗಳು 100 ರೂ. ಅರ್ಜಿ ಸಲ್ಲಿಸಬೇಕು. ಮಹಿಳೆ / ಎಸ್‌ಸಿ/ ಎಸ್‌ಟಿ/ ಮಾಜಿ ಸೈನಿಕರಿಗೆ ಯಾವುದೇ ಶುಲ್ಕವಿಲ್ಲ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ 2024ರ ಫೆಬ್ರವರಿಯಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಸಹಾಯವಾಣಿ: 080-25502520ಕ್ಕೆ ಕರೆ ಮಾಡಿ.

ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌ ವಿಳಾಸ

ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್‌ ವಿಳಾಸ: https://ssc.nic.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಗಮನಿಸಿ ಆನ್‌ಲೈನ್‌ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗೋಲ್ಡನ್‌ ಚಾನ್ಸ್‌; 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Exit mobile version