ಬೆಂಗಳೂರು: ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ (Kodagu District Court Recruitment 2023). ಸ್ಟೆನೋಗ್ರಾಫರ್, ಜವಾನ ಸೇರಿದಂತೆ ಖಾಲಿ ಇರುವ ಒಟ್ಟು 64 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 10 (Job Alert). ಉದ್ಯೋಗದ ಸ್ಥಳ: ಕೊಡಗು.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸ್ಟೇನೋಗ್ರಾಫರ್-2, ಟೈಪಿಸ್ಟ್-17, ಟೈಪಿಸ್ಟ್ ಕಾಪಿಸ್ಟ್-7, ಪ್ರೊಸೆಸ್ ಸರ್ವರ್-8, ಜವಾನ-30 ಹುದ್ದೆಗಳಿವೆ ಎಂದು ಅಧಿಸೂಚನೆ ತಿಳಿಸಿದೆ.
ಸ್ಟೆನೋಗ್ರಾಫರ್- 12ನೇ ತರಗತಿ, ಡಿಪ್ಲೊಮಾ
ಟೈಪಿಸ್ಟ್ – 12ನೇ ತರಗತಿ, ಡಿಪ್ಲೊಮಾ
ಟೈಪಿಸ್ಟ್-ಕಾಪಿಯಿಸ್ಟ್- 12ನೇ ತರಗತಿ
ಪ್ರೊಸೆಸ್ ಸರ್ವರ್- 10ನೇ ತರಗತಿ
ಜವಾನ- 10ನೇ ತರಗತಿ ಓದಿರಬೇಕು. ಜತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರೀಕ್ಷೆಯಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಮಾತ್ರವಲ್ಲ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನೂ ಹೊಂದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ. ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ಇದೆ. ಎಸ್‌ಸಿ/ಎಸ್‌ಟಿ/ ಪ್ರವರ್ಗ I ಅಭ್ಯರ್ಥಿಗಳಿಗೆ 5 ವರ್ಷ, ಕೆಟಗರಿ 2A/ 2B/ 3A & 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯುಡಿ/ ವಿಧವಾ/ ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಸ್‌ಸಿ/ಎಸ್‌ಟಿ/ ಪ್ರವರ್ಗ I/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಕ್ಯಾಟಗರಿ 2A/ 2B/ 3A & 3B ಅಭ್ಯರ್ಥಿಗಳು 150 ರೂ. ಮತ್ತು ಸಾಮಾನ್ಯ ಅಭ್ಯರ್ಥಿಗಳು 300 ರೂ. ಅರ್ಜಿ ಸುಲ್ಕ ಪಾವತಿಸಬೇಕು. ಆನ್‌ಲೈನ್ ಮೂಲಕ ಶುಲ್ಕ ಪಾವತಿಸುವುದು ಕಡ್ಡಾಯ. ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸಂವಹನಕ್ಕೆ ಅಗತ್ಯವಾದ, ಸರಿಯಾದ ಫೋನ್ ನಂಬರ್, ಇ-ಮೇಲ್ ಐಡಿ ನಮೂದಿಸಿ. ಐಡಿ ಪ್ರೂಫ್, ವಯಸ್ಸಿನ ದಾಖಲಾತಿ, ಶೈಕ್ಷಣಿಕ ಅರ್ಹತೆಯ ದಾಖಲಾತಿ, ರೆಸ್ಯೂಮ್ ಇತ್ಯಾದಿ ರೆಡಿ ಮಾಡಿಟ್ಟುಕೊಳ್ಳಿ.
- Kodagu District Court Recruitment 2023 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಅಗತ್ಯವಾದ ಎಲ್ಲ ಮಾಹಿತಿಗಳನ್ನು ತುಂಬಿ. ಡಾಕ್ಯುಮೆಂಟ್ನ ಸ್ಕ್ಯಾನ್ ಪ್ರತಿ, ನಿಮ್ಮ ಫೋಟೊ (ಅಗತ್ಯವಿದ್ದರೆ ಮಾತ್ರ) ಅಪ್ಲೋಡ್ ಮಾಡಿ
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ)
- ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿದ ಬಳಿಕ Kodagu District Court Recruitment 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು Submit ಬಟನ್ ಕ್ಲಿಕ್ ಮಾಡಿ.
- ಈ ಅಪ್ಲಿಕೇಶನ್ ಫಾರಂ ಅನ್ನು ಪ್ರಿಂಟ್ ತೆಗೆದಿಡಿ
ಇದನ್ನೂ ಓದಿ: Job Alert: ಎಸ್ಸೆಸ್ಸೆಲ್ಲಿ ತೇರ್ಗಡೆಯಾದವರಿಗೆ ಗುಡ್‌ನ್ಯೂಸ್; ಅಂಚೆ ಇಲಾಖೆಯ 1,899 ಹುದ್ದೆಗಳಿಗೆ ಅಪ್ಲೈ ಮಾಡಿ