Site icon Vistara News

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Job Alert

Anganwadi

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ (Anganwadi Worker And Helper Recruitment 2024). ಇದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 19 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ.

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಜತೆಗೆ ಡಿ.ಎಸ್‌.ಇ.ಆರ್‌.ಟಿ.ಯಿಂದ ಇ.ಸಿ.ಸಿ.ಇ. ಡಿಪ್ಲೋಮಾ ಕೋರ್ಸ್‌, ಜೆ.ಒ.ಸಿ. ಕೋರ್ಸ್‌, ಎನ್‌.ಟಿ.ಟಿ. ಕೋರ್ಸ್‌ ಮತ್ತು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಡಿಪ್ಲೋಮಾ ನ್ಯೂಟ್ರಿಶಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೆಟ್‌ ಕೋರ್ಸ್‌, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ಲಭಿಸಲಿದೆ.

ಅಂಗನವಾಡಿ ಸಹಾಯಕಿ: ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ / ಮುಕ್ತ ವಿದ್ಯಾಲಯಗಳಲ್ಲಿ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರು. ಇವರು ಪ್ರಥಮ / ದ್ವಿತೀಯ ಭಾಷೆಯಾಗಿ ಕನ್ನಡ ಮತ್ತು ಸಾಮಾನ್ಯ ಗಣಿತ, ಸಮಾಜ ಶಾಸ್ತ್ರ / ಸಮಾಜ ವಿಜ್ಞಾನಗಳನ್ನು ಕಡ್ಡಾಯವಾಗಿ ಓದಿರಬೇಕು. ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ಓದಿದವರೂ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ; ವಿವಿಧ ಹುದ್ದೆಗಳಿಗೆ ಏ. 25ರೊಳಗೆ ಅರ್ಜಿ ಸಲ್ಲಿಸಿ

Exit mobile version