Site icon Vistara News

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Job Alert

Job Alert

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (KPSC Group B (RPC) Recruitment 2024). ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Exit mobile version