Site icon Vistara News

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Job Alert

Job Alert

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (KPSC) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಕಿರಿಯ ಎಂಜಿನಿಯರ್‌, ಸಹಾಯಕ ಗ್ರಂಥ ಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ಇನಾಂಕ ಮೇ 28 (Job Alert).

ಹುದ್ದೆಗಳ ವಿವರ

ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆ: 216 ಹುದ್ದೆ, ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 54 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)- ಜಲ ಸಂಪನ್ಮೂಲ ಇಲಾಖೆ: 26 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 4 ಹುದ್ದೆ, ಸಹಾಯಕ ಗ್ರಂಥಪಾಲಕ-ಸಾರ್ವಜನಿಕ ಗ್ರಂಥಾಲಯ: 13 ಹುದ್ದೆಗಳಿವೆ.

ವಿದ್ಯಾರ್ಹತೆ

ಕಿರಿಯ ಇಂಜಿನಿಯರ್ (JE): ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಸಿವಿಲ್‌ / ಮೆಕ್ಯಾನಿಕಲ್‌ ಡಿಪ್ಲೋಮಾ ಪದವಿ ಪಡೆದಿರಬೇಕು.

ಗ್ರಂಥಾಲಯ ಸಹಾಯಕ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಡಿಪ್ಲೋಮಾ ಇನ್‌ ಲೈಬ್ರರಿ ಸೈನ್ಸ್‌ (Diploma in Library Science) ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ. ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲೇ ಪಾವತಿ ಮಾಡಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ವಿಷಯಗಳ ಪತ್ರಿಕೆಯನ್ನು ಹೊಂದಿದೆ. ಪ್ರತಿಯೊಂದು ಪತ್ರಿಕೆಯು 100 ಅಂಕಗಳ ಪ್ರಶ್ನೆಯನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಒಟ್ಟು ಅಂಕ 200. ಗಮನಿಸಿ, ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರಿಸಬೇಕು. ಆಯ್ಕೆಯಾಗುವ ಕಿರಿಯ ಎಂಜಿನಿಯರ್‌ಗೆ 33,450 ರೂ. -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. – 58,250 ರೂ. ಮಾಸಿಕ ವೇತನ ಲಭಿಸಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Exit mobile version