ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗಾಕಾಂಕ್ಷಿಗಳಿಗೆ ಕರೆ ನೀಡಿದೆ. ಆಯೋಗವು ನಾಗರಿಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ಗ್ರೂಪ್ ʼಸಿʼ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ʼಸಹಾಯಕ ನಗರ ಯೋಜಕರʼ ಹುದ್ದೆಗೆ ಒಟ್ಟು 60 ಸ್ಥಾನಗಳಿವೆ. ಉಳಿಕೆ ಮೂಲ ವೃಂದದಲ್ಲಿ 50 ಹಾಗೂ ಹೈದರಾಬಾದ್ ಕರ್ನಾಟಕ ವೃಂದಕ್ಕೆ 10 ಸ್ಥಾನಗಳನ್ನು ಮೀಸಲಿಡಲಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 30-04-2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-05-2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31-05-2022
ಅರ್ಜಿ ಸಲ್ಲಿಸುವ ಹಂತಗಳು
ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಭರ್ತಿ ಮಾಡಬೇಕು. ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅರ್ಜಿಗಳು ಲಭ್ಯವಿರಲಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೂರು ಹಂತಗಳಲ್ಲಿ ಪೂರ್ಣಗೊಳ್ಳಲಿದೆ.
- ಮೊದಲನೇ ಹಂತ: ಪ್ರೊಫೈಲ್ ಸಿದ್ಧಪಡಿಸುವುದು (profile creation/updation)
- ಎರಡನೇ ಹಂತ: ಅರ್ಜಿ ಸಲ್ಲಿಸುವಿಕೆ (Application Submission)
- ಮೂರನೇ ಹಂತ: ಹಣ ಪಾವತಿ (Fees Payment through My Application section)
ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: ₹600/-
ಪ್ರವರ್ಗ 2(ಎ),2(ಬಿ),3(ಎ),2(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ: ₹300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಪಾವತಿಯಿಂದ ವಿನಾಯಿತಿ ಇದೆ
ಎಲ್ಲಾ ಅಭ್ಯರ್ಥಿಗಳೂ ₹35 ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾತಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಬಳಸಿ
ಅರ್ಜಿಯನ್ನು ಸಲ್ಲಿಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷಾ ವಿಧಾನದಲ್ಲಿ ತೇರ್ಗಡೆಯನ್ನು ಹೊಂದಿದವರು ಈ ಹುದ್ದೆಗೆ ಅರ್ಹರಾಗುತ್ತಾರೆ.
ಇದನ್ನೂ ಓದಿ: Job Alert | RBI ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೇದಿನ