Site icon Vistara News

Job Alert: ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

mandya dcc bank

mandya dcc bank

ಬೆಂಗಳೂರು: ರಾಜ್ಯದಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಗಮ (Mandya District Cooperative Central Bank Ltd) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 94 ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು (Mandya Dcc Bank Recruitment 2024). ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಿರಿಯ ಸಹಾಯಕರು- 70 ಹುದ್ದೆ- ವಿದ್ಯಾರ್ಹತೆ: ದ್ವಿತೀಯ ಪಿಯುಸಿ ತೇರ್ಗಡೆಯಾಗಿರ ಬೇಕು. ಕನ್ನಡ ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು. ಜತೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯ.
ವಾಹನ ಚಾಲಕರು- 2 ಹುದ್ದೆ- ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ ಪಾಸ್‌ ಆಗಿರುವ ಜತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನುಬದ್ಧ ಡ್ರೈವಿಂಗ್ ಲೈಸನ್ಸ್‌ ಹೊಂದಿರಬೇಕು.
ಅಟೆಂಡರ್- 21 ಹುದ್ದೆ- ಎಸ್ಸೆಸ್ಸೆಲ್ಸಿ ಪಾಸ್‌ ಆಗಿರುವ ಜತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಐಟಿ ಚೀಫ್‌ ಮ್ಯಾನೇಜರ್‌ – 1 ಹುದ್ದೆ – ವಿದ್ಯಾರ್ಹತೆ: ಕಂಪ್ಯೂಟರ್‌ ಸೈನ್ಸ್‌ನಲ್ಲಿ ಎಂ.ಟೆಕ್‌.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗುತ್ತದೆ. ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಲಭ್ಯ. ಸಾಮಾನ್ಯ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 1,500 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂ. ಇದನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ವೇತನ ಶ್ರೇಣಿ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಕಿರಿಯ ಸಹಾಯಕರಿಗೆ: 30,350 ರೂ.-58,250 ರೂ., ಡ್ರೈವರ್‌ಗೆ: 27,650 ರೂ.- 52,650 ರೂ., ಅಟೆಂಡರ್‌ಗೆ 23,500 ರೂ.- 47,650 ರೂ. ಮತ್ತು ಐಟಿ ಚೀಫ್‌ ಮ್ಯಾನೇಜರ್‌ ಹುದ್ದೆಗೆ: 43,100 ರೂ.-83,900 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಐಟಿ ಚೀಫ್‌ ಮ್ಯಾನೇಜರ್‌ ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Fair: ಜ. 28ರಂದು ಉದ್ಯೋಗ ಮೇಳ; ಎಸ್ಸೆಸ್ಸೆಲಿ ವಿದ್ಯಾರ್ಹತೆ ಹೊಂದಿದವರಿಗೂ ಇದೆ ಅವಕಾಶ

Exit mobile version