Site icon Vistara News

Job Alert: ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಹುದ್ದೆಗಳಿಗೆ ನ.6ರಿಂದ ಅರ್ಜಿ ಸಲ್ಲಿಸಿ

typist

typist

ಬೆಂಗಳೂರು: ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (Job Alert). ಶೀಘ್ರ ಲಿಪಿಗಾರರು (Stenographer Grade III)-10, ಬೆರಳಚ್ಚುಗಾರರು (Typist)-6, ಬೆರಳಚ್ಚು-ನಕಲುಗಾರರು (Typist-Copyist)-2 ಮತ್ತು ಜವಾನ-36 ಹುದ್ದೆಗಳು ಖಾಲಿ ಇವೆ. ಈ 54 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ನವೆಂಬರ್‌ 6ರಂದು ಆರಂಭವಾಗಲಿದ್ದು, ಕೊನೆಯ ದಿನಾಂಕ ಡಿಸೆಂಬರ್‌ 5.

ವಿದ್ಯಾರ್ಹತೆ

ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ/ ದ್ವಿತೀಯ ಪಿಯುಸಿ/ ಡಿಪ್ಲೋಮಾ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ವಿಧಾನ ಮತ್ತು ವಯೋಮಿತಿ

ಅರ್ಹತಾ ಪರೀಕ್ಷೆ(ಜವಾನ ಹುದ್ದೆಗೆ ಹೊರತುಪಡಿಸಿ) ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯಸ್ಸು-35 ವರ್ಷ. ಮೀಸಲಾತಿಗೆ ಅನುಗುಣವಾಗಿ ರಿಯಾಯಿತಿ ಲಭ್ಯ. ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳ ವಯಸ್ಸು 38 ವರ್ಷ ದಾಟಿರಬಾರದು. ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ 1 ವರ್ಗಕ್ಕೆ ಸೇರಿದವರು 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ

ಸಾಮಾನ್ಯ ವರ್ಗ/ ಪ್ರವರ್ಗ 2(ಎ), 2(ಬಿ), 3(ಎ), 3(ಬಿ)/ ಮಾಜಿ ಸೈನಿಕ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬೇಕು. ನೆಟ್‌ ಬ್ಯಾಂಕಿಂಗ್‌/ ಕ್ರೆಡಿಟ್‌/ ಡೆಬಿಟ್‌ ಕಾರ್ಡ್‌/ ಯುಪಿಐ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಡಿಮ್ಯಾಂಡ್‌ ಡ್ರಾಫ್ಟ್‌/ ಪೋಸ್ಟಲ್‌ ಆರ್ಡರ್‌/ ಮನಿ ಆರ್ಡರ್‌ ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಕೆ ವಿಧಾನ

ಗಮನಿಸಿ: ಯಾವುದೇ ಕಾರಣಕ್ಕೂ ಆನ್‌ಲೈನ್‌ ಹೊರತುಪಡಿಸಿ ಇತರ ಯಾವುದೇ ವಿಧಾನಗಳಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ dk.dcourts.gov.inಗೆ ಭೇಟಿ ನೀಡಿ.

ಇದನ್ನೂ ಓದಿ: AAICLAS Recruitment 2023: 436 ಅಸಿಸ್ಟೆಂಟ್‌ ಹುದ್ದೆಗಳಿಗೆ ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಿ

Exit mobile version