Site icon Vistara News

Job Alert: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿಯಲ್ಲಿದೆ 277 ಹುದ್ದೆ; ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಏ. 2 ಕೊನೆಯ ದಿನ

job alert

job alert

ಬೆಂಗಳೂರು: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (National Aluminium Company Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (NALCO Recruitment 2024). ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನ ಏಪ್ರಿಲ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮೆಕ್ಯಾನಿಕಲ್‌- 127, ಎಲೆಕ್ಟ್ರಿಕಲ್‌- 100, ಇನ್‌ಸ್ಟ್ರುಮೆಂಟೇಷನ್‌- 20, ಲೋಹಶಾಸ್ತ್ರ (Metallurgy)- 10, ಕೆಮಿಕಲ್‌- 13, ಕೆಮಿಸ್ಟ್ರಿ- 7 ಹುದ್ದೆಗಳಿವೆ. ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆಗೆ ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ, ಕೆಮಿಕಲ್‌, ಲೋಹಶಾಸ್ತ್ರ, ಎಲೆಕ್ಟ್ರಿಕಲ್‌, ಇನ್‌ಸ್ಟ್ರುಮೆಂಟೇಷನ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿ.ಇ / ಬಿ.ಟೆಕ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 30 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಿದರೆ ಸಾಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಇದಕ್ಕಾಗಿ ಇಂಟರ್‌ನೆಟ್‌ ಬ್ಯಾಂಕಿಂಗ್‌ / ಡೆಬಿಟ್‌ / ಕ್ರೆಡಿಟ್‌ ಕಾರ್ಟ್‌ / ಯುಪಿಐ ಪಾವತಿ ವಿಧಾನವನ್ನು ಬಳಸಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

GATEರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ವೈಯಕ್ತಿಕ ಸಂದರ್ಶನ, ಡಾಕ್ಯುಮೆಂಟ್‌ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. ನೇಮಕ ಹೊಂದುವವರಿಗೆ 40,000 ರೂ. – 1,80,000 ರೂ. ಮಾಸಿಕ ವೇತನವಿದೆ. ಆಯ್ಕೆಯಾಗುವವರಿಗೆ ಕಂಪೆನಿಯ ವಿವಿಧ ಬ್ರ್ಯಾಂಚ್‌ಗಳಲ್ಲಿ ಒಂದು ವರ್ಷ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿನ ಅವರ ಸಾಮರ್ಥ್ಯವನ್ನು ಗಮನಿಸಿ ಬಳಿಕ ಅವರನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳಲಾಗುತ್ತದೆ. ಉದ್ಯೋಗದ ಸ್ಥಳ: ಭಾರತದಾದ್ಯಂತ ಅಥವಾ ವಿದೇಶ. ಸ್ಥಳವನ್ನು ಬಳಿಕ ನಿರ್ಧರಿಸಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಆಗ್ನೇಯ ಮಧ್ಯ ರೈಲ್ವೆಯಿಂದ 733 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ; ಐಟಿಐ ಪಾಸಾದವರು ಅಪ್ಲೈ ಮಾಡಿ

Exit mobile version