Site icon Vistara News

Job Alert: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿದೆ 119 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ

nia jobs

nia jobs

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 119 ಹುದ್ದೆಗಳು ಲಭ್ಯವಿದ್ದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (NIA Recruitment 2024). ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಾಳೆ (ಫೆಬ್ರವರಿ 22). ಹೀಗಾಗಿ ಈಗಲೇ ಅರ್ಜಿ ಸಲ್ಲಿಸಿ (Job Alert).

ಹುದ್ದೆಗಳ ವಿವರ

ಇನ್ಸ್‌ಪೆಕ್ಟರ್‌: 43 ಹುದ್ದೆ, ಸಬ್‌ ಇನ್ಸ್‌ಪೆಕ್ಟರ್‌: 51 ಹುದ್ದೆ, ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌: 13 ಹುದ್ದೆ ಮತ್ತು ಹೆಡ್‌ ಕಾನ್ಸ್‌ಟೇಬಲ್‌: 12 ಹುದ್ದೆಗಳಿವೆ.

ವಿದ್ಯಾರ್ಹತೆ

ಇನ್ಸ್‌ಪೆಕ್ಟರ್‌: ಅಧಿಕೃತ ವಿಶ್ವ ವಿದ್ಯಾನಿಲಯದಿಂದ ಪದವಿ.
ಸಬ್‌ ಇನ್ಸ್‌ಪೆಕ್ಟರ್‌: ಅಧಿಕೃತ ವಿಶ್ವ ವಿದ್ಯಾನಿಲಯದಿಂದ ಪದವಿ.
ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌: ಅಧಿಕೃತ ವಿಶ್ವ ವಿದ್ಯಾನಿಲಯದಿಂದ ಪದವಿ.
ಹೆಡ್‌ ಕಾನ್ಸ್‌ಟೇಬಲ್‌: 12ನೇ ತರಗತಿ ತೇರ್ಗಡೆ. ಜತೆಗೆ ಎಲ್ಲ ಹುದ್ದೆಗಳಿಗೆ ಕನಿಷ್ಠ 2 ವರ್ಷಗಳ ಕಾರ್ಯಾನುಭವ ಕಡ್ಡಾಯ.

ವಯೋಮಿತಿ

ಕನಿಷ್ಠ 18 ವರ್ಷದಿಂದ ಗರಿಷ್ಠ 56 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ಸ್ಥಾನಕ್ಕೆ ಸಂಬಂಧಿಸಿದ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಮೌಲ್ಯಮಾಪನ ಮಾಡಲು ಲಿಖಿತ ಪರೀಕ್ಷೆಯನ್ನು ಪೂರ್ಣಗೊಳಿಸಬೇಕು.

ದಾಖಲೆ ಪರಿಶೀಲನೆ/ವೈದ್ಯಕೀಯ ಪರೀಕ್ಷೆ: ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ದಾಖಲೆಗಳ ಸಿಂಧುತ್ವವನ್ನು ಖಾತರಿಪಡಿಸಲು ದಾಖಲೆ ಪರಿಶೀಲನೆ ನಡೆಯಲಿದೆ. ಬಳಿಕ ಅವರು ತಮ್ಮ ದೈಹಿಕ ಸಾಮರ್ಥ್ಯವನ್ನು ನಿರ್ಧರಿಸಲು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು.

ಅಂತಿಮ ಹಂತ: ಕೊನೆಯಲ್ಲಿ ಅರ್ಜಿದಾರರ ಒಟ್ಟಾರೆ ಕಾರ್ಯಕ್ಷಮತೆ ಮತ್ತು ಅರ್ಹತೆಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ವಿವರಗಳಿಗೆ NIA Recruitment 2024ರ ಅಧಿಕೃತ ಅಧಿಸೂಚನೆ ಪರಿಶೀಲಿಸಿ. ಅದಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಡಿಪ್ಲೋಮಾ ಪದವೀಧರರಿಗೆ ಗುಡ್‌ನ್ಯೂಸ್‌; ರೈಲ್ವೇ ನೇಮಕಾತಿ ಮಂಡಳಿಯಿಂದ 9,000 ಹುದ್ದೆ ಭರ್ತಿ

Exit mobile version