Site icon Vistara News

Job Alert: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ

ntpc

ntpc

ಹೊಸದಿಲ್ಲಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಮಿಟೆಡ್ (National Thermal Power Corporation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NTPC Recruitment 2023). 10ನೇ ತರಗತಿ ಪಾಸಾದವರು, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು. ಒಟ್ಟು 114 ಹುದ್ದೆಗಳಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಡಿಸೆಂಬರ್‌ 31 (Job Alert).

ಹುದ್ದೆಗಳ ವಿವರ

ಮೈನಿಂಗ್ ಓವರ್‌ಮನ್: 52, ಮ್ಯಾಗಜೀನ್ ಇನ್‌ಚಾರ್ಜ್‌: 7, ಮೆಕ್ಯಾನಿಕಲ್ ಸೂಪರ್‌ ವೈಸರ್: 21, ಎಲೆಕ್ಟ್ರಿಕಲ್ ಸೂಪರ್‌ವೈಸರ್: 13, ವೊಕೇಷನಲ್ ಟ್ರೈನಿಂಗ್ ಇನ್‌ಸ್ಟ್ರಕ್ಟರ್: 3, ಜೂನಿಯರ್ ಮೈನ್ ಸರ್ವೇಯರ್: 11, ಮೈನಿಂಗ್ ಸರ್ದಾರ್: 7 ಹುದ್ದೆಗಳಿವೆ. 10ನೇ ತರಗತಿ ತೇರ್ಡೆಯಾಗಿರುವವರು ಮೈನಿಂಗ್ ಸರ್ದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಉಳಿದೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಪ್ಲೋಮಾದಲ್ಲಿ ಕನಿಷ್ಠ 60% ಅಂಕದೊಂದಿಗೆ ಪಾಸಾಗಿರುವುದು ಕಡ್ಡಾಯ.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ವೊಕೇಷನಲ್ ಟ್ರೈನಿಂಗ್ ಇನ್‌ಸ್ಟ್ರಕ್ಟರ್ ಹುದ್ದೆಗೆ 40 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ವಿನಾಯಿತಿ ಲಭ್ಯ. ಒಬಿಸಿ- 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ವೇತನದ ವಿವರ

ಲಿಖಿತ ಪರೀಕ್ಷೆ ಮತ್ತು ಕೌಶಲ್ಯ / ಸಾಮರ್ಥ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಮೈನಿಂಗ್ ಸರ್‌ದಾರ್ ಹುದ್ದೆಗೆ 40,000 ರೂ. ಮತ್ತು ಉಳಿದೆಲ್ಲ ಹುದ್ದೆಗಳಿಗೆ 50,000 ರೂ. ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ / ಮಾಜಿ ಸೈನಿಕ ಕೆಟಗರಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇದಕ್ಕಾಗಿ ನೆಟ್‌ ಬ್ಯಾಂಕಿಂಗ್‌, ಡೆಬಿಟ್‌ / ಕ್ರೆಡಿಟ್‌ ಕಾರ್ಡ್‌ ಬಳಸಬಹುದು. ಝಾರ್ಖಂಡ್‌ ರಾಜಧಾನಿ ರಾಂಚಿಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅರ್ಜಿ ಸಲ್ಲಿಕೆ ವಿಧಾನ

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ www.ntpc.co.inಗೆ ಭೇಟಿ ನೀಡಿ ಎಂದು ಪ್ರಕಟಣೆ ತಿಳಿಸಿದೆ.

Exit mobile version