ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು (Bank of Baroda Recruitment 2024). ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).
ಹುದ್ದೆಗಳ ವಿವರ
627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ
ಆರ್ಕಿಟೆಕ್ಟ್: 8 ಹುದ್ದೆ
ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ
ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ
ಸೀನಿಯರ್ ಮ್ಯಾನೇಜರ್: 22 ಹುದ್ದೆ
ಮ್ಯಾನೇಜರ್: 11 ಹುದ್ದೆ
ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ
ಗ್ರೂಪ್ ಹೆಡ್: 4 ಹುದ್ದೆ
ಟೆರಿಟರಿ ಹೆಡ್: 8 ಹುದ್ದೆ
ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್: 234 ಹುದ್ದೆ
ಇ-ವೆಲ್ತ್ ರಿಲೇಶನ್‌ಶಿಪ್ ಮ್ಯಾನೇಜರ್: 26 ಹುದ್ದೆ
ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ
ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ
ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ
ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್ ಮ್ಯಾನೇಜರ್: 19 ಹುದ್ದೆ
ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್‌ಶಿಪ್ ಮ್ಯಾನೇಜರ್: 15 ಹುದ್ದೆ
ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ
ರಿಲೇಶನ್‌ಶಿಪ್ ಮ್ಯಾನೇಜರ್: 66 ಹುದ್ದೆ
ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ
ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್ – 3 ಹುದ್ದೆಗಳಿವೆ.
ವಿದ್ಯಾರ್ಹತೆ
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.
ಅರ್ಜಿ ಶುಲ್ಕ ಮತ್ತು ವಯೋಮಿತಿ
ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್ ಮತ್ತು ಒಬಿಎಸ್ ವರ್ಗಗಳಿಗೆ ಸೇರಿದ ಅರ್ಜಿದಾರರು 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ವರ್ಗಗಳಿಗೆ ಸೇರಿದ ಅರ್ಜಿದಾರರು 199 ರೂ. ಪಾವತಿಸಬೇಕಾಗುತ್ತದೆ. ಇದಕ್ಕೆ ತೆರಿಗೆ ಪ್ರತ್ಯೇಕ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24 ವರ್ಷಗಳಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಬಹುದು.
ಆಯ್ಕೆ ವಿಧಾನ
ಆನ್‌ಲೈನ್ ಪರೀಕ್ಷೆ, ಗ್ರೂಪ್ ಡಿಸ್ಕಷನ್, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.
ನಿಯಮಿತ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಗುತ್ತಿಗೆ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.bankofbaroda.in/career/current-opportunities)
- ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
- ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ಫಾರಂನ ಪ್ರಿಂಟ್ಔಟ್ ತೆಗೆದಿಡಿ.
ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್; ಇಂದೇ ಅರ್ಜಿ ಸಲ್ಲಿಸಿ