ಬೆಂಗಳೂರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಕಾರ್ಯನಿರ್ವಾಹಕ (ಕಾರ್ಯಾಚರಣೆ) (Assistant Executives (Operations) ಹುದ್ದೆ ಇದಾಗಿದ್ದು, 223 ಉದ್ಯೋಗಿಗಳ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (NTPC Recruitment 2024). ವಿವಿಧ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಫೆಬ್ರವರಿ 8 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸಾಮಾನ್ಯ ವಿಭಾಗಕ್ಕೆ 98, ಇಡಬ್ಲ್ಯುಎಸ್ ವಿಭಾಗಕ್ಕೆ 22, ಒಬಿಸಿ ವಿಭಾಗಕ್ಕೆ 40, ಎಸ್‌ಸಿ ವಿಭಾಗಕ್ಕೆ 39, ಎಸ್‌ಟಿ ವಿಭಾಗಕ್ಕೆ 24 ಹುದ್ದೆಗಳಿವೆ. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ / ಮೆಕ್ಯಾನಿಕಲ್ ವಿಷಯಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. 1 ವರ್ಷಗಳ ಕಾರ್ಯಾನುಭವ ಹೊಂದಿರುವುದು ಕಡ್ಡಾಯ. ಸಾಮಾನ್ಯ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಪದವಿಯಲ್ಲಿ ಶೇ. 40ರಷ್ಟು ಅಂಕ ಪಡೆದಿರಬೇಕು. ಎಸ್‌ಸಿ / ಎಸ್‌ಟಿ/ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ತೇರ್ಗಡೆಯಾಗಿದ್ದರೆ ಸಾಕು.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಸಾಮಾನ್ಯ/ ಇಡಬ್ಲ್ಯುಎಸ್ / ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್ / ಆಫ್‌ಲೈನ್ ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 55,000 ರೂ. ಮಾಸಿಕ ವೇತನ ದೊರೆಯಲಿದೆ. ಹೆಚ್ಚುವರಿಯಾಗಿ ಎಚ್ಆರ್‌ಎ / ನೈಟ್ ಶಿಫ್ಟ್‌ಗೆ ವಸತಿ ಸೌಲಭ್ಯ ಇತ್ಯಾದಿ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
NTPC Recruitment 2024ರ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಹೋಮ್ ಪೇಜ್ನಲ್ಲಿ ಕಾಣಿಸುವ Register ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೆಸರು ನೋಂದಾಯಿಸಿ.
- ಬಳಿಕ ಅಗತ್ಯವಾದ ಮಾಹಿತಿಗಳನ್ನು ತುಂಬಿ.
- ಬೇಕಾದ ಡಾಕ್ಯುಮೆಂಟ್, ಫೋಟೊ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ತುಂಬಿ (ಅಗತ್ಯವಿದ್ದವರು ಮಾತ್ರ).
- ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿ ಫಾರಂನ ಪ್ರಿಂಟ್ ಔಟ್ ತೆಗೆದಿಡಿ.
ಹೆಚ್ಚಿನ ಮಾಹಿತಿಗಾಗಿ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ ವಿಳಾಸ https://www.ntpc.co.in/ಗೆ ಭೇಟಿ ನೀಡಿ.
ಇದನ್ನೂ ಓದಿ: Job Alert: ಗುಡ್ ನ್ಯೂಸ್!: ಸದ್ಯವೇ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕ