ಬೆಂಗಳೂರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation Limited) ಖಾಲಿ ಇರುವ 25 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NTPC Recruitment 2024). ಸುಮಾರು 25 ಅಸಿಸ್ಟೆಂಟ್ ಮ್ಯಾನೇಜರ್ (ಹಣಕಾಸು) ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜನವರಿ 18 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸಾಮಾನ್ಯ ವರ್ಗಕ್ಕೆ 13, ಇಡಬ್ಲ್ಯುಎಸ್‌ಗೆ 2, ಒಬಿಸಿಗೆ 6, ಎಸ್‌ಸಿಗೆ 3 ಮತ್ತು ಎಸ್‌ಟಿ ವಿಭಾಗಕ್ಕೆ 1 ಹುದ್ದೆಗಳಿವೆ. ಹೀಗೆ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸಿಎ, ಸಿಎಂಎ ಪೂರ್ಣಗೊಳಿಸಿರಬೇಕು. ಜತೆಗೆ 7 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿವುವವರ ವಯಸ್ಸು 37 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಲಿಕೆ ಅನ್ವಯವಾಗುತ್ತದೆ.
ಆಯ್ಕೆ ವಿಧಾನ ಮತ್ತು ವೇತನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಮಾಸಿಕ ವೇತನ 60,000 ರೂ. – 1,80,000 ರೂ. ಸಿಗಲಿದೆ.
ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಯೋಧರು ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಿಲ್ಲ. ಸಾಮಾನ್ಯ / ಇಡಬ್ಲ್ಯುಎಸ್ / ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಪಾವತಿಸಬಹುದು. ಆನ್‌ಲೈನ್‌ನಲ್ಲಾದರೆ ನೆಟ್ ಬ್ಯಾಂಕಿಂಗ್, ಡೆಬಿಟ್ / ಕ್ರೆಡಿಟ್ ಕಾರ್ಡ್ ಬಳಸಬಹುದು.
NTPC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಬಳಿಕ Join Us ಆಯ್ಕೆ ಮೇಲೆ ಕ್ಲಿಕ್ ಮಾಡಿ Jobs at NTPC ಸೆಲೆಕ್ಟ್ ಮಾಡಿ.
- Register / Apply Online ಆಯ್ಕೆ ಮೇಲೆ ಕ್ಲಿಕ್ ಮಾಡಿ
- ಇಮೇಲ್ ಐಡಿ ಮತ್ತು ಮೊಬೈಲ್ ಫೋನ್ ನಂಬರ್ ಬಳಸಿ ಹೆಸರು ನೋಂದಾಯಿಸಿ
- ಸರಿಯಾದ ಮಾಹಿತಿ ನೀಡಿ ಅರ್ಜಿ ಫಾರಂ ಭರ್ತಿ ಮಾಡಿ
- ಅಗತ್ಯವಾದ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ತುಂಬಿ (ಅಗತ್ಯವಿದ್ದರೆ ಮಾತ್ರ)
- ಮತ್ತೊಮ್ಮೆ ಮಾಹಿತಿ ಪರಿಶೀಲಿಸಿ SUBMIT ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರ್ಮ್ನ ಪ್ರಿಂಟ್ ಔಟ್ ತೆಗೆದಿಡಿ
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ವಿಳಾಸ https://www.ntpc.co.in/ಕ್ಕೆ ಭೇಟಿ ನೀಡಿ.
ಇದನ್ನೂ ಓದಿ: Job Alert: ಬಿಐಎಸ್‌ನ 107 ಸಲಹೆಗಾರರ ಹುದ್ದೆಗಳಿಗೆ ಪದವೀಧರರು ಅರ್ಜಿ ಸಲ್ಲಿಸಿ