ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ಹಲವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಖಾಲಿ ಇರುವ ಸುಮಾರು 64 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯ ದಿನ ಎಂದು ಹೇಳಲಾಗಿತ್ತು. ಇದೀಗ ಅವಧಿಯನ್ನು ಮಾರ್ಚ್ 21 (ಗುರುವಾರ)ರ ತನಕ ವಿಸ್ತರಿಸಲಾಗಿದೆ. ಹೀಗಾಗಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಸಹಾಯಕ ಎಂಜಿನಿಯರ್ (ಸಿವಿಲ್) ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ) ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸಹಾಯಕ ಎಂಜಿನಿಯರ್ (ಸಿವಿಲ್)-50 ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ)- 14 ಹುದ್ದೆಗಳಿವೆ. ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಇ. ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು. ಅದೇ ರೀತಿ ಬಿ.ಕಾಂ ಪದವಿ ಪಡೆದವರು ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ
ಸಾಮಾನ್ಯ / ಪ್ರವರ್ಗ 2ಎ / 2ಬಿ / 3ಎ / 3ಬಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವವರು 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಅನ್ವಯಯಾಗುತ್ತದೆ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕರ್ನಾಟಕ ಪರೀಕ್ಷಾ ಪ್ರಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 27,650 ರೂ.-83,900 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪರೀಕ್ಷಾ ವಿಧಾನ
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಫ್‌ಲೈನ್ ಮೂಲಕ ಒಎಂಆರ್ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುವುದು. ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆ: ತಲಾ ನೂರು ಅಂಕಗಳ ಎರಡು ಪ್ರಶ್ನೆ ಪತ್ರಿಕೆ ಇರಲಿದೆ. ಪತ್ರಿಕೆ -1ರಲ್ಲಿ ಸಾಮಾನ್ಯ ಜ್ಞಾನದ ಪ್ರಶ್ನೆಗಳಿದ್ದರೆ, ಪತ್ರಿಕೆ – 2ರಲ್ಲಿ ನಿರ್ದಿಷ್ಟ ವಿಷಯದ ಕುರಿತಾದ ಪ್ರಶ್ನೆಗಳಿರುತ್ತವೆ.
ಪ್ರಥಮ ದರ್ಜೆ ಸಹಾಯಕರು ಹುದ್ದೆ: ತಲಾ ನೂರು ಅಂಕಗಳ ಎರಡು ಪ್ರಶ್ನೆ ಪತ್ರಿಕೆ ಇರಲಿದೆ. ಪತ್ರಿಕೆ -1ರಲ್ಲಿ ಸಾಮಾನ್ಯ ಜ್ಞಾನದ ಪ್ರಶ್ನೆಗಳಿದ್ದರೆ, ಪತ್ರಿಕೆ – 2ರಲ್ಲಿ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಪಟ್ಟ ಪ್ರಶ್ನೆಗಳಿರುತ್ತವೆ.
ಪರೀಕ್ಷೆ ನಡೆಯುವ ಸ್ಥಳ
ಈ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಪ್ರತಿಕಾ ಪ್ರಕಟಣೆ ಮತ್ತು ವೆಬ್‌ಸೈಟ್ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23460460ಕ್ಕೆ ಕರೆ ಮಾಡಿ.
ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ