Site icon Vistara News

Job Alert: ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಲ್ಲಿದೆ 1,025 ಹುದ್ದೆ; ಇಂದಿನಿಂದಲೇ ಅರ್ಜಿ ಸಲ್ಲಿಸಿ

punjab national bank

punjab national bank

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ಪಂಜಾಬ್ ನ್ಯಾಷನಲ್‌ ಬ್ಯಾಂಕ್ (Punjab National Bank) ನಿಮಗೆ ಸುವರ್ಣಾವಕಾಶ ಒದಗಿಸುತ್ತಿದೆ. ಪಂಜಾಬ್ ನ್ಯಾಷನಲ್‌ ಬ್ಯಾಂಕ್ ದೇಶದಾದ್ಯಂತ ತನ್ನ ವಿವಿಧ ಬ್ರ್ಯಾಂಚ್‌ಗಳಲ್ಲಿ ಖಾಲಿ ಇರುವ ವಿವಿಧ ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (PNB SO Recruitment 2024). ಕ್ರೆಡಿಟ್ / ಮ್ಯಾನೇಜರ್ ಫಾರೆಕ್ಸ್, ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ ಸೇರಿ ಬರೋಬ್ಬರಿ 1,025 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಫೆಬ್ರವರಿ 25 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕ್ರೆಡಿಟ್‌ ಆಫೀಸರ್‌ – 1,000, ಮ್ಯಾನೇಜರ್‌-ಫಾರೆಕ್ಸ್‌ – 15, ಮ್ಯಾನೇಜರ್‌ – ಸೈಬರ್‌ ಸೆಕ್ಯುರಿಟಿ – 5, ಸೀನಿಯರ್‌ ಮ್ಯಾನೇಜರ್‌ ಸೈಬರ್‌ ಸೆಕ್ಯುರಿಟಿ- 5 ಹುದ್ದೆಗಳಿವೆ. ಹುದ್ದೆಗಳಿಗೆ ಸಂಬಂಧಿತ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ / ಸಿಎ / ಸಿಎಂಎ / ಐಡಿಡಬ್ಲ್ಯುಎ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಮ್ಯಾನೇಜರ್‌ ಫಾರೆಕ್ಸ್‌- ಕನಿಷ್ಠ: 25 ವರ್ಷ, ಗರಿಷ್ಠ: 35 ವರ್ಷ
ಮ್ಯಾನೇಜರ್‌ ಸೈಬರ್‌ ಸೆಕ್ಯುರಿಟಿ- ಕನಿಷ್ಠ: 25 ವರ್ಷ, ಗರಿಷ್ಠ: 35
ಸೀನಿಯರ್‌ ಮ್ಯಾನೇಜರ್‌ ಸೈಬರ್‌ ಸೆಕ್ಯುರಿಟಿ- ಕನಿಷ್ಠ: 27 ವರ್ಷ, ಗರಿಷ್ಠ: 38
ಆಫೀಸರ್‌ ಕ್ರೆಡಿಟ್‌- ಕನಿಷ್ಠ: 21 ವರ್ಷ, ಗರಿಷ್ಠ: 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗ, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳು 1,180 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 59 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ವಿವಿಧ ಹಂತಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆರಂಭದಲ್ಲಿ ಆನ್‌ಲೈನ್‌ ಮೂಲಕ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. 200 ಅಂಕಗಳನ್ನು ಒಳಗೊಂಡ ಈ ಪರೀಕ್ಷೆಗೆ 2 ಗಂಟೆಗಳ ಸಮಯಾವಕಾಶ ಇರುತ್ತದೆ. ಇದರಲ್ಲಿ ಆಯ್ಕೆಯಾದವರನ್ನು ಸಂದರ್ಶನ ನಡೆಸಲಾಗುತ್ತದೆ. ಇದಕ್ಕೆ 50 ಅಂಕಗಳನ್ನು ನಿಗದಿ ಪಡಿಸಲಾಗಿದೆ. ಬಳಿಕ ಅಭ್ಯರ್ಥಿಗಳ ಡಾಕ್ಯುಮೆಂಟ್‌ ಪರಿಶೀಲಿಸಿ ಆಯ್ಕೆ ಮಾಡಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಬ್ಯಾಂಕ್‌ ಉದ್ಯೋಗದ ಕನಸು ಕಾಣುವವರಿಗೆ ಸುವರ್ಣಾವಕಾಶ; 606 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

Exit mobile version