Site icon Vistara News

Job Alert: ಪದವಿ ಪೂರೈಸಿದವರಿಗೆ ಉದ್ಯೋಗಾವಕಾಶ; ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

rec

rec

ಬೆಂಗಳೂರು: ರೂರಲ್‌ ಎಲೆಕ್ಟ್ರಿಫಿಕೇಷನ್‌ ಕಾರ್ಪೋರೇಷನ್‌ ಲಿಮಿಟೆಡ್‌ (Rural Electrification Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜನರಲ್‌ ಮ್ಯಾನೇಜರ್‌, ಚೀಫ್‌ ಮ್ಯಾನೇಜರ್‌, ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌ ಸೇರಿ ಸುಮಾರು 127 ಹುದ್ದೆಗಳು ಖಾಲಿ ಇವೆ (REC Recruitment 2024). ಭಾರತಾದ್ಯಂತ ಇದುವ ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 9 (Job Alert).

ಹುದ್ದೆಗಳ ವಿವರ ಮತ್ತು ವಯೋಮಿತಿ

ಡೆಪ್ಯುಟಿ ಜನರಲ್‌ ಮ್ಯಾನೇಜರ್‌ – 1 ಹುದ್ದೆ – ವಯೋಮಿತಿ: 48 ವರ್ಷ
ಚೀಫ್‌ ಮ್ಯಾನೇಜರ್‌ – 4 ಹುದ್ದೆ – ವಯೋಮಿತಿ: 45 ವರ್ಷ
ಮ್ಯಾನೇಜರ್‌ – 4 ಹುದ್ದೆ – ವಯೋಮಿತಿ: 42 ವರ್ಷ
ಅಸಿಸ್ಟಂಟ್‌ ಮ್ಯಾನೇಜರ್‌ 52 ಹುದ್ದೆ – ವಯೋಮಿತಿ: 35 ವರ್ಷ
ಆಫೀಸರ್‌ – 43 ಹುದ್ದೆ- ವಯೋಮಿತಿ: 33 ವರ್ಷ
ಡೆಪ್ಯುಟಿ ಮ್ಯಾನೇಜರ್‌ – 19 ಹುದ್ದೆ – ವಯೋಮಿತಿ: 39 ವರ್ಷ
ಅಸಿಸ್ಟಂಟ್‌ ಆಫೀಸರ್‌ – 3 ಹುದ್ದೆ – ವಯೋಮಿತಿ: 40 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಹತೆ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಸಿಎ / ಸಿಎಂಎ / ಪದವಿ / ಸ್ನಾತಕೋತ್ತರ ಪದವಿ (ಸಂಬಂಧಪಟ್ಟ ವಿಷಯಗಳಲ್ಲಿ) ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,000 ರೂ. ಅನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಹುದ್ದೆಗೆ ಅನುಗುಣವಾಗಿ 30,000-2,60,000 ರೂ. ಮಾಸಿಕ ವೇತನ ದೊರೆಯಲಿದೆ.

REC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಹೆಚ್ಚಿನ ವಿವರಗಳಿಗೆ ರೂರಲ್‌ ಎಲೆಕ್ಟ್ರಿಫಿಕೇಷನ್‌ ಕಾರ್ಪೋರೇಷನ್‌ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://recindia.nic.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಎನ್‌ಟಿಪಿಸಿಯ 223 ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Exit mobile version