Site icon Vistara News

Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನ

Job Alert

Job Alert

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ರಿಕ್ರೂಟ್‌ಮೆಂಟ್‌ ಸೆಲ್‌ (Railway Recruitment Cell) ಈಶಾನ್ಯ ರೈಲ್ವೆ ವಿಭಾಗ (North Eastern Railway)ದಲ್ಲಿ ಖಾಲಿ ಇರುವ 1,104 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಿದೆ (RRC NER Apprentice Recruitment 2024). 1 ವರ್ಷಗಳ ತರಬೇತಿ ಅವಧಿ ಇದಾಗಿದ್ದು, ಐಟಿಐ ಪಾಸಾಗಿ ದೇಶದ ಯಾವುದೇ ಭಾಗದಲ್ಲಿ ಉದ್ಯೋಗ ನಿರ್ವಹಿಸಲು ತಯಾರಿರುವವರು ಸರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ನಾಳೆ (ಜುಲೈ 11) (Job Alert).

ಹುದ್ದೆಗಳ ವಿವರ

ಮೆಕ್ಯಾನಿಕಲ್ ವರ್ಕ್‌ಶಾಪ್‌ ಗೋರಖ್‌ಪುರ್- 411
ಸಿಗ್ನಲ್ ವರ್ಕ್‌ಶಾಪ್‌ ಗೋರಖ್‌ಪುರ್- 63
ಬ್ರಿಡ್ಜ್‌ ವರ್ಕ್‌ಶಾಪ್‌ ಗೋರಖ್‌ಪುರ್‌- 35
ಮೆಕ್ಯಾನಿಕಲ್ ವರ್ಕ್‌ಶಾಪ್‌ ಇಜ್ಜಾತ್‌ ನಗರ್- 151
ಡೀಸೆಲ್ ಶೇಡ್‌ ಇಜ್ಜಾತ್ ನಗರ್- 60
ಕ್ಯಾರಿಯೇಜ್ ಆ್ಯಂಡ್‌ ವ್ಯಾಗನ್ ಇಜ್ಜಾತ್ ನಗರ್- 64
ಕ್ಯಾರಿಯೇಜ್ ಅಂಡ್ ವ್ಯಾಗನ್ ಲಕ್ನೊ ಜಂಕ್ಷನ್- 155
ಡೀಸೆಲ್‌ ಶೆಡ್ ಗೊಂಡ- 90
ಕ್ಯಾರಿಯೇಜ್ ಆ್ಯಂಡ್‌ ವ್ಯಾಗನ್ ವಾರಣಾಸಿ- 75 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಎಸ್‌ಎಸ್‌ಎಲ್‌ಸಿ ನಂತರ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್‌, ಕಾರ್ಪೆಂಟರ್, ಮಷಿನಿಸ್ಟ್‌ ಮತ್ತಿತರ ಟ್ರೇಡ್‌ಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ. 50 ಅಂಕಗಳೊಂದಿಗೆ ಐಟಿಐ ತೇರ್ಗಡೆ ಹೊಂದಿರುವುದು ಕಡ್ಡಾಯ. ಜತೆಗೆ ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 15 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ವಿಶೇಷ ಚೇತನರಿಗೆ 10 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಆರ್ಥಿಕವಾಗಿ ಹಿಂದುಳಿದವರು / ಮಹಿಳಾ ಅಭ್ಯರ್ಥಿಗಳು, ವಿಶೇಷ ಚೇತನರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

RRC NER Apprentice Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

ಇದನ್ನೂ ಓದಿ: Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Exit mobile version