Site icon Vistara News

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Job Alert

Job Alert

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಅಂತಹವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಚೇರಿ ಸಹಾಯಕ – 5,538 ಹುದ್ದೆ, ಆಫೀಸರ್ ಸ್ಕೇಲ್ 1 – 2,485 ಹುದ್ದೆ, ಆಫೀಸರ್ ಸ್ಕೇಲ್ 2 – 315 ಹುದ್ದೆ, ಆಫೀಸರ್ ಸ್ಕೇಲ್ 2 – 68 ಹುದ್ದೆ, ಆಫೀಸರ್ ಸ್ಕೇಲ್ 2 – 21 ಹುದ್ದೆ, ಆಫೀಸರ್ ಸ್ಕೇಲ್ 2 – 24 ಹುದ್ದೆ, ಆಫೀಸರ್ ಸ್ಕೇಲ್ 2 – 8 ಹುದ್ದೆ, ಆಫೀಸರ್ ಸ್ಕೇಲ್ 2 – 3 ಹುದ್ದೆ, ಆಫೀಸರ್ ಸ್ಕೇಲ್ 2 – 59 ಹುದ್ದೆ, ಆಫೀಸರ್ ಸ್ಕೇಲ್ 3 – 73 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಆಫೀಸರ್ ಸ್ಕೇಲ್ 1 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಆಫೀಸರ್ ಸ್ಕೇಲ್ 2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಆಫೀಸರ್ ಸ್ಕೇಲ್ 3 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 850 ರೂ. ಮತ್ತು ಪ.ಜಾ. / ಪ.ಪಂ. / ಅಂಗವಿಕಲ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಇಂಟರ್‌ನೆಟ್‌ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Exit mobile version