ನವದೆಹಲಿ: ರೈಲ್ವೆಯಲ್ಲಿ (Indian Railway) ಉದ್ಯೋಗ ನಿರ್ವಹಿಸಬೇಕು ಎನ್ನುವುದು ಬಹುತೇಕರ ಕನಸು. ಈ ಕನಸು ನನಸಾಗಲು ಇನ್ನು ಹೆಚ್ಚು ದಿನ ಕಾಯಬೇಕಾಗಿಲ್ಲ. ಯಾಕೆಂದರೆ ಭಾರತೀಯ ರೈಲ್ವೆಯು ಇದೀಗ ದೇಶದ ಹಲವು ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಬರೋಬ್ಬರಿ 5,696 ಅಸಿಸ್ಟಂಟ್ ಲೋಕೋ ಪೈಲಟ್ (Assistant Loco Pilot) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (RRB ALP Recruitment 2024). ಈ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 19 ಅರ್ಜಿ ಸಲ್ಲಿಕೆಗೆ ಕೊನೆಯ ದಿನ (Job Alert).
ವಯೋಮಿತಿ
ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸು ಕನಿಷ್ಠ 18 ಮತ್ತು ಗರಿಷ್ಠ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.
ವಿದ್ಯಾರ್ಹತೆ ಮತ್ತು ಅರ್ಜಿ ಶುಲ್ಕ
ಮೆಟ್ರಿಕ್ಯೂಲೇಷನ್ / ಎಸ್ಸೆಸ್ಸೆಲ್ಸಿ ಜತೆಗೆ ಐಟಿಐ ಶಿಕ್ಷಣವನ್ನು ಅಂಗೀಕೃತ ಸಂಸ್ಥೆಗಳಲ್ಲಿ ಪಡೆದು ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಹೊಂದಿದವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವಿಭಾಗ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳ ಅರ್ಜಿ ಶುಲ್ಕ 250 ರೂ.
ಆಯ್ಕೆ ವಿಧಾನ
ಆಯ್ಕೆ ವಿಧಾನ 5 ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT 1), ಎರಡನೇ ಹಂತದಲ್ಲಿ CBT 2, ಬಳಿಕ ಕಂಪ್ಯೂಟರ್ ಬೇಸ್ಟ್ ಆಪ್ಟಿಟ್ಯೂಡ್ ಟೆಸ್ಟ್ (CBAT), ನಂತರ ಡಾಕ್ಯುಮೆಂಟ್ ಪರಿಶೀಲನೆ (DV) ಮತ್ತು ಕೊನೆಯ ಹಂತದಲ್ಲಿ ವೈದ್ಯಕೀಯ ಪರೀಕ್ಷೆ (ME) ನಡೆಯಲಿದೆ. ಆಯ್ಕೆಯಾದವರಿಗೆ 19,900 ರೂ. – 63,200 ರೂ. ಮಾಸಿಕ ವೇತನವಿದೆ.
ಅಗತ್ಯವಾದ ಡಾಕ್ಯುಮೆಂಟ್
ಅರ್ಜಿಯೊಂದಿಗೆ ಅಗತ್ಯವಿರುವ ದಾಖಲೆಗಳು: ಇತ್ತೀಚಿನ, ಬಣ್ಣದ ಪಾಸ್‌ಪೋರ್ಟ್ ಫೋಟೊ. ಇದು ಬಿಳಿ ಹಿನ್ನೆಲೆಯಲ್ಲಿರಬೇಕು. ಸ್ಕ್ಯಾನ್ ಮಾಡಿದ ಸಹಿ ಹೊಂದಿರಬೇಕು. ಇನ್ನು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಪಿಡಿಎಫ್ ರೂಪದಲ್ಲಿ ಎಸ್‌ಸಿ / ಎಸ್‌ಟಿ ಪ್ರಮಾಣ ಪತ್ರ ಅಪ್‌ಲೋಡ್ ಮಾಡಬೇಕು.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- Click to Submit Online Application ಆಯ್ಕೆ ಮೇಲೆ ಕ್ಲಿಕ್ ಮಾಡಿ Apply ಬಟನ್ ಸೆಲೆಕ್ಟ್ ಮಾಡಿ.
- ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ ಲಾಗಿನ್ ಆಗಿ.
- ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯವಾದ ಡಾಕ್ಯುಮೆಂಟ್, ಫೋಟೊಗಳನ್ನು ನಿರ್ದಿಷ್ಟ ಅಳತೆಯಲ್ಲಿ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ತುಂಬಿ.
- ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಇದನ್ನೂ ಓದಿ: Job Alert: ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ