Site icon Vistara News

Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert

Job Alert

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಇಲ್ಲಿದೆ ಭರಪೂರ ಅವಕಾಶ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಭಾರೀ ಉದ್ಯೋಗಾವಕಾಶಗಳಿವೆ. ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಈ ನೇಮಕಾತಿ ನಡೆಸುತ್ತಿದೆ (RPF Recruitment 2024). ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ (Railway Protection Force)ನಲ್ಲಿ ಬರೋಬ್ಬರಿ 4,660 ಹುದ್ದೆಗಳಿವೆ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾನ್‌ಸ್ಟೇಬಲ್‌ – 4,208, ಸಬ್‌ ಇನ್ಸ್‌ಪೆಕ್ಟರ್‌ – 452 ಹುದ್ದೆಗಳಿವೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 25 ವರ್ಷ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 28 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು 250 ರೂ. ಪಾವತಿಸಬೇಕು.

ವೇತನ ಮತ್ತು ಆಯ್ಕೆ ವಿಧಾನ

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 21,700 ರೂ. ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ 35,400 ರೂ. ಮಾಸಿಕ ವೇತನ ಲಭ್ಯ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ (PET, PMT), ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

ಇದನ್ನೂ ಗಮನಿಸಿ

ಲಿಖಿತ ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕಗಳಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಲಿಖಿತ ಪರೀಕ್ಷೆಯ ಅವಧಿ 90 ನಿಮಿಷದ ಅವಧಿಯದ್ದಾಗಿದ್ದು, ಪ್ರಶ್ನೆಗಳು ಬಹು ಆಯ್ಕೆಯ ಉತ್ತರವನ್ನು ಒಳಗೊಂಡಿದೆ. ಕಾನ್‌ಸ್ಟೇಬಲ್‌ ಹುದ್ದೆಯ ಪರೀಕ್ಷೆ ಎಸ್ಸೆಸ್ಸೆಲ್ಸಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದ್ದು, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಯ ಪರೀಕ್ಷೆ ಪದವಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Exit mobile version