Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ - Vistara News

ಉದ್ಯೋಗ

Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12.

VISTARANEWS.COM


on

IRCTC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಉದ್ಯೋಗ

Job Alert: ವಿಜ್ಞಾನಿಯಾಗಬೇಕೆ? ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿದೆ ಅವಕಾಶ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ನೀವು ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಭಾರತ ಸರ್ಕಾರದ ಮಿನಿಸ್ಟ್ರಿ ಆಫ್‌ ಟೆಕ್ಸ್‌ಟೈಲ್ಸ್‌ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಉತ್ತಮ ಅವಕಾಶ ಒದಗಿಸುತ್ತಿದೆ. ಸಿಎಸ್‌ಬಿ ತನ್ನಲ್ಲಿ ಖಾಲಿ ಇರುವ 122 ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 5.

VISTARANEWS.COM


on

Job Alert
Koo

ಬೆಂಗಳೂರು: ನೀವು ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಭಾರತ ಸರ್ಕಾರದ ಮಿನಿಸ್ಟ್ರಿ ಆಫ್‌ ಟೆಕ್ಸ್‌ಟೈಲ್ಸ್‌ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ (Central Silk Board) ಉತ್ತಮ ಅವಕಾಶ ಒದಗಿಸುತ್ತಿದೆ. ಸಿಎಸ್‌ಬಿ ತನ್ನಲ್ಲಿ ಖಾಲಿ ಇರುವ 122 ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CSB Recruitment 2024). ಸ್ನಾತಕೋತ್ತರ ಪದವಿ (Master’s Degree) ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 5 (Job Alert).

ವಿದ್ಯಾರ್ಹತೆ ಮತ್ತು ಹುದ್ದೆಗಳ ವಿವರ

ಸಿಎಸ್‌ಬಿಯ ಈ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ ವಿಜ್ಞಾನ / ಕೃಷಿ ವಿಜ್ಞಾನ (Science/Agricultural Science) ವಿಷಯದಲ್ಲಿ ಸ್ನಾತಕೋತ್ತರ ಪದವಿ (Master’s Degree) ಪಡೆದಿರಬೇಕು. ಸಾಮಾನ್ಯ ವರ್ಗಕ್ಕೆ-50, ಎಸ್‌ಸಿ-20, ಎಸ್‌ಟಿ-9, ಒಬಿಸಿ-31, ಇಡಬ್ಲ್ಯುಎಸ್‌-12 ಮತ್ತು ಪಿಡಬ್ಲ್ಯುಬಿಡಿ ವರ್ಗಕ್ಕೆ 8 ಹುದ್ದೆಗಳಿವೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಸಿಎಸ್‌ಬಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಆಯ್ಕೆ ವಿಧಾನ ಮತ್ತು ಮಾಸಿಕ ಸಂಬಳ

ಜೆಆರ್‌ಎಫ್‌ ಹಾಗೂ ಎಸ್‌ಆರ್‌ಎಫ್‌ ಅಥವಾ ಪಿಎಚ್‌ಡಿ ಪ್ರವೇಶಕ್ಕಾಗಿ ಇಂಡಿಯನ್ ಕೌನ್ಸಿಲ್ ಆಫ್‌ ಅಗ್ರಿಕಲ್ಚರ್ ರಿಸರ್ಚ್‌ (ICAR) ನಡೆಸುವ ಆಲ್‌ ಇಂಡಿಯಾ ಕಾಂಪಿಟೇಟಿವ್ ಎಕ್ಸಾಮ್‌ (AICE) ಅನ್ನು ಬರೆದಿರಬೇಕು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್‌ ಮಾಡಿ, ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 56,100 ರೂ. – 1,77,500 ರೂ. ಮಾಸಿಕ ವೇತನ ಲಭ್ಯ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗ / ಒಬಿಸಿ / ಇಡಬ್ಲ್ಯುಎಸ್‌ / ಮಾಜಿ ಯೋಧರು 1,000 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಪೋಸ್ಟ್‌ ಆಫೀಸ್‌ ಮೂಲಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸುಲ್ಕವಿಲ್ಲ.

CSB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://karnemaka.kar.nic.in/CSB_rec_24/)
  • SUBMIT APPLICATION
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಹೆಲ್ಪ್‌ಲೈನ್‌ ನಂಬರ್‌: 011-4075 9000, 011-6922770ಗೆ ಕರೆ ಮಾಡಿ ಅಥವಾ ಇಬೇಲ್‌ ಐಡಿ: icar@nta.ac.in ಮೇಲ್‌ ಮಾಡಿ.

ಅಧಿಕೃತ ವೆಬ್‌ಸೈಟ್‌ ವಿಳಾಸ: csb.gov.in

ಇದನ್ನೂ ಓದಿ: RRB Recruitment 2024: ಗುಡ್‌ನ್ಯೂಸ್‌; ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ

Continue Reading

ವಿದೇಶ

IBM: ಐಬಿಎಂನಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ; ಚೀನಾದ ಕಚೇರಿ ಬೆಂಗಳೂರಿಗೆ ಸ್ಥಳಾಂತರ

IBM: ಅಮೆರಿಕ ಮೂಲದ ಐಟಿ ದಿಗ್ಗಜ ಸಂಸ್ಥೆ ಇಂಟರ್‌ನ್ಯಾಷನಲ್ ಬಿಸಿನೆಸ್ ಮಷಿನ್ಸ್ ಚೀನಾದ ಪ್ರಮುಖ ಸಂಶೋಧನಾ ವಿಭಾಗವನ್ನು ಮುಚ್ಚಲು ನಿರ್ಧರಿಸಿದೆ. ಇದರಿಂದ 1,000ಕ್ಕೂ ಮಂದಿ ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳಲಿದ್ದಾರೆ. ಕಂಪನಿಯು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

IBM
Koo

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕ ಮೂಲದ ಐಟಿ ದಿಗ್ಗಜ ಸಂಸ್ಥೆ ಇಂಟರ್‌ನ್ಯಾಷನಲ್ ಬಿಸಿನೆಸ್ ಮಷಿನ್ಸ್ (IBM) ಚೀನಾದ ಪ್ರಮುಖ ಸಂಶೋಧನಾ ವಿಭಾಗವನ್ನು ಮುಚ್ಚಲು ನಿರ್ಧರಿಸಿದೆ. ಇದರಿಂದ 1,000ಕ್ಕೂ ಮಂದಿ ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳಲಿದ್ದಾರೆ (Layoffs). ಕಂಪನಿಯು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಐಬಿಎಂ ಚೀನಾದಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಟೆಸ್ಟಿಂಗ್‌ ಶಾಖೆಗಳನ್ನು ಮುಚ್ಚಲು ನಿರ್ಧರಿಸಿದೆ ಎಂದು ವರದಿಯೊಂದು ಹೇಳಿದೆ. ಆರ್ಥಿಕ ಕುಸಿತದ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಜತೆಗೆ ಚೀನಾ ಸ್ಥಳೀಯ ಕಂಪನಿಗಳ ಪರವಾಗಿದೆ ಎಂಬ ಆತಂಕದಿಂದಾಗಿ ವಿದೇಶಿ ಹೂಡಿಕೆ ಭಾಗಶಃ ನಿಧಾನಗೊಂಡಿರುವುದು ಕೂಡ ಕಚೇರಿ ಸ್ಥಳಾಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಚೇರಿ ತೆರೆಯುವ ಸಾಧ್ಯತೆ ಇದೆ. ವಿಶ್ವದ ಅತಿದೊಡ್ಡ ತಂತ್ರಜ್ಞಾನ ಸೇವೆಗಳ ಕಂಪನಿಯಾದ ಐಬಿಎಂ ಸದ್ಯ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಉದ್ಯೋಗ ಕಡಿತ

ಐಬಿಎಂ ಕೆಲವು ತಿಂಗಳ ಹಿಂದೆಯೂ ಉದ್ಯೋಗ ಕಡಿತಗೊಳಿಸಿತ್ತು. ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗದಲ್ಲಿ ಉದ್ಯೋಗ ಕಡಿತಗೊಂಡಿತ್ತು. ಐಬಿಎಂನ ಮುಖ್ಯ ಸಂವಹನ ಅಧಿಕಾರಿ ಜೊನಾಥನ್ ಅಡಾಶೆಕ್ ಅವರು ಇಲಾಖೆಯ ಉದ್ಯೋಗಿಗಳೊಂದಿಗೆ ನಡೆಸಿದ ಸಭೆಯಲ್ಲಿ ವಜಾಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಐಬಿಎಂ 3,900 ಜನರನ್ನು ಕೆಲಸದಿಂದ ತೆಗೆಯಲಿರುವುದಾಗಿ ಜನವರಿಯಲ್ಲಿ ಹೇಳಿತ್ತು. ಈ ಕಾರ್ಯದಿಂದ ಸಂಸ್ಥೆಗೆ 400 ಮಿಲಿಯನ್ ಡಾಲರ್ (33,12,92,00,000 ರೂ.) ಹಣ ಉಳಿತಾಯವಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಣವನ್ನು ಪುನಾರಚನೆ ಕಾರ್ಯಗಳಿಗೆ ಬಳಸಲಾಗುವುದು ಎಂದು ಅಂದು ಐಬಿಎಂನ ಚೀಫ್ ಫೈನಾನ್ಷಿಯಲ್ ಆಫೀಸರ್ ಜೇಮ್ಸ್ ಕೆವನಾಘ್ ತಿಳಿಸಿದ್ದರು.

2022ರಿಂದ ಈಚೆಗೆ ವಿವಿಧ ಟೆಕ್ ಕಂಪನಿಗಳ ಬಹಳಷ್ಟು ಉದ್ಯೋಗಿಗಳು ಉದ್ಯೋಗ ಕಳೆದುಕೊಂಡಿದ್ದಾರೆ. ಈ ವರ್ಷ 204 ಟೆಕ್ ಕಂಪನಿಗಳು ಉದ್ಯೋಗ ಕಡಿತದ ನಿರ್ಧಾರ ಕೈಗೊಂಡಿವೆ. ಇದರಿಂದ 49,978 ಮಂದಿ ಟೆಕ್ಕಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Lays off: 200 ಉದ್ಯೋಗಿಗಳ ಹಬ್ಬದ ಖುಷಿ ಕಿತ್ತುಕೊಂಡ ಎಲ್‌&ಟಿ ಟೆಕ್ನಾಲಜಿ ಸರ್ವೀಸ್!

Continue Reading

ಉದ್ಯೋಗ

Job Alert: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ ಟ್ರೈನಿ, ಆಫೀಸ್‌ ಅಸಿಸ್ಟಂಟ್‌ ಸೇರಿ ಸುಮಾರು 100 ಹುದ್ದೆಗಳು ಖಾಲಿ ಇದ್ದು, ಐಟಿಐ, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಸೆಪ್ಟೆಂಬರ್‌ 4 .

VISTARANEWS.COM


on

Job Alert
Koo

ಬೆಂಗಳೂರು: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ (Bharat Earth Movers Limited) ಖಾಲಿ ಇರುವ ವಿವಿಧ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BEML Recruitment 2024). ಬೆಮೆಲ್‌ (ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌) ರಕ್ಷಣೆ ಮತ್ತು ಏರೋಸ್ಪೇಸ್‌ ವಲಯದಲ್ಲಿ ನಾನಾ ಉತ್ಪನ್ನಗಳನ್ನು ಮಾರಾಟ ಮಾಡುತ್ತದೆ. ಗಣಿಗಾರಿಕೆ ಮತ್ತು ನಿರ್ಮಾಣ ವಲಯದ ಯಂತ್ರೋಪಕರಣಗಳನ್ನು ಉತ್ಪಾದಿಸುತ್ತದೆ. ಮೆಟ್ರೊ, ರೈಲ್ವೆ ವಲಯದಲ್ಲೂ ಸಕ್ರಿಯವಾಗಿದೆ. ಹೀಗಾಗಿ ಉದ್ಯೋಗ ಅರಸುವವರಿಗೆ ಇದೊಂದು ಅತ್ಯುತ್ತಮ ಅವಕಾಶ. ಐಟಿಐ ಟ್ರೈನಿ, ಆಫೀಸ್‌ ಅಸಿಸ್ಟಂಟ್‌ ಸೇರಿ ಸುಮಾರು 100 ಹುದ್ದೆಗಳು ಖಾಲಿ ಇದ್ದು, ಐಟಿಐ, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಸೆಪ್ಟೆಂಬರ್‌ 4 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಐಟಿಐ ಟ್ರೈನಿ-ಫಿಟ್ಟರ್‌- 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಟರ್ನರ್- 11 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಮೆಕ್ಯಾನಿಷ್ಟ್‌- 10 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಎಲೆಕ್ಟ್ರಿಷಿಯನ್‌- 8 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ವೆಲ್ಡರ್‌- 18 ಹುದ್ದೆ, ವಿದ್ಯಾರ್ಹತೆ: ಐಟಿಐ
ಆಫೀಸ್‌ ಅಸಿಸ್ಟಂಟ್‌ ಟ್ರೈನಿ-46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಪದವಿ. ಎಲ್ಲ ಹುದ್ದೆಗಳಿಗೆ 3 ವರ್ಷಗಳ ಕಾರ್ಯಾನುಭವ ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಕೆಯ ಗರಿಷ್ಠ ವಯೋಮಿತಿ 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ಅಭ್ಯರ್ಥಿಗಳು 200 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ

ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ, ಟ್ರೇಡ್‌ ಟೆಸ್ಟ್‌ ಮತ್ತು ಸಂದರ್ಸನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://kps14.exmegov.com/).
  • ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: bemlindia.inಗೆ ಭೇಟಿ ನೀಡಿ ಅಥವಾ ಇಮೇಲ್‌ ವಿಳಾಸ recruitment@bemlltd.inಗೆ ಮೇಲ್‌ ಕಳುಹಿಸಿ.

ಇದನ್ನೂ ಓದಿ: RRB Recruitment 2024: ಗುಡ್‌ನ್ಯೂಸ್‌; ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ

Continue Reading

ವಾಣಿಜ್ಯ

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (Unified Pension Scheme) ಅರ್ಥೈಸಿಕೊಳ್ಳಲು ನೆರವಾಗುವ ಕೆಲವು ಪ್ರಮುಖ ಅಂಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

VISTARANEWS.COM


on

By

Unified Pension Scheme
Koo

ನಿವೃತ್ತಿಯ ಬಳಿಕ ಸರ್ಕಾರಿ ನೌಕರರಿಗೆ (central government employees) ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಉದ್ದೇಶದಿಂದ 23 ಲಕ್ಷ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ʼಏಕೀಕೃತ ಪಿಂಚಣಿ ಯೋಜನೆʼಗೆ (Unified Pension Scheme) ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಯುಪಿಎಸ್‌ ವೈಶಿಷ್ಟ್ಯಗಳೇನು?

1. ಖಚಿತ ಪಿಂಚಣಿ

ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇ. 50ರಷ್ಟು ಖಚಿತವಾದ ಪಿಂಚಣಿಯನ್ನು ಪಡೆಯುತ್ತಾರೆ. 25 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ. ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.

2. ಖಚಿತವಾದ ಕುಟುಂಬ ಪಿಂಚಣಿ

ಅಪಘಾತದಿಂದ ನೌಕರ ಮರಣ ಹೊಂದಿದರೆ ಅವರ ಸಂಗಾತಿಯು ಅಥವಾ ಅವಲಂಬಿತರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಮರಣದ ಮೊದಲು ಉದ್ಯೋಗಿ ಪಡೆಯುತ್ತಿದ್ದ ಪಿಂಚಣಿಯ ಶೇ. 60ರಷ್ಟು ಅವರ ಸಂಗಾತಿಗೆ ಕುಟುಂಬ ಪಿಂಚಣಿಯಾಗಿ ದೊರೆಯುತ್ತದೆ.

3. ಖಚಿತವಾದ ಕನಿಷ್ಠ ಪಿಂಚಣಿ

ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ನಿವೃತ್ತಿಯ ಅನಂತರ ತಿಂಗಳಿಗೆ 10,000 ರೂ. ಕನಿಷ್ಠ ಪಿಂಚಣಿಯ ಖಾತರಿ ಇದೆ.

4. ಹಣದುಬ್ಬರ ಸೂಚ್ಯಂಕ

ಖಚಿತ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ.

5. ದರ ಏರಿಕೆ ಪರಿಹಾರ

ಸೇವೆಯಲ್ಲಿರುವ ಉದ್ಯೋಗಿಗಳಂತೆಯೇ ಯುಪಿಎಸ್ ಅಡಿಯಲ್ಲಿ ನಿವೃತ್ತರಾದ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ದರ ಏರಿಕೆ ಪರಿಹಾರವನ್ನು ಪಡೆಯುತ್ತಾರೆ.


6. ನಿವೃತ್ತಿಯ ಮೇಲೆ ಒಟ್ಟು ಮೊತ್ತ

ಗ್ರಾಚ್ಯುಟಿ ಜೊತೆಗೆ ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತದ ಪಾವತಿಯನ್ನು ಸ್ವೀಕರಿಸುತ್ತಾರೆ. ಈ ಪಾವತಿಯು ವೇತನ ಮತ್ತು ತುಟ್ಟಿ ಭತ್ಯೆ ಸೇರಿ ನಿವೃತ್ತಿಯ ದಿನಾಂಕ ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ. ಈ ಒಟ್ಟು ಮೊತ್ತದ ಪಾವತಿಯು ಖಚಿತವಾದ ಪಿಂಚಣಿಯ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.

7. ಸರ್ಕಾರದ ಕೊಡುಗೆ

ಈ ಪಿಂಚಣಿ ಯೋಜನೆಯಡಿ ಸರ್ಕಾರವು ತನ್ನ ಕೊಡುಗೆಯನ್ನು ಶೇ. 14ರಿಂದ ಶೇ.18.5ಕ್ಕೆ ಹೆಚ್ಚಿಸುತ್ತಿದೆ. ಆದರೆ ನೌಕರರ ಕೈಯಿಂದ ಈಗಿರುವ ಪ್ರಮಾಣದಷ್ಟೇ ಹಣ ಈ ಯೋಜನೆಗೆ ಸಂದಾಯವಾಗುತ್ತದೆ. ಹಾಗಾಗಿ ಇದರಿಂದ ನೌಕರರಿಗೆ ಹೆಚ್ಚು ಪ್ರಯೋಜನ ಸಿಗುವಂತಾಗುತ್ತದೆ.


8. ನಿವೃತ್ತಿ ಹೊಂದಿದವರಿಗೂ ಅನ್ವಯ

ಏಕೀಕೃತ ಪಿಂಚಣಿ ಯೋಜನೆಯ ನಿಬಂಧನೆಗಳು ರಾಷ್ಟ್ರೀಯ ಪಿಂಚಣಿ ಯೋಜನೆ ಹೊಂದಿರುವ ಹಿಂದಿನ ನಿವೃತ್ತರಿಗೆ ಅಂದರೆ ಈಗಾಗಲೇ ನಿವೃತ್ತಿ ಹೊಂದಿದವರಿಗೂ ಅನ್ವಯಿಸುತ್ತದೆ. ಹಿಂದಿನ ಅವಧಿಯ ಬಾಕಿಯನ್ನು ಪಿಪಿಎಫ್ ದರಗಳಲ್ಲಿ ಬಡ್ಡಿಯೊಂದಿಗೆ ಪಾವತಿಸಲಾಗುತ್ತದೆ.

ಇದನ್ನೂ ಓದಿ: Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

9. ಏಕೀಕೃತ ಪಿಂಚಣಿ ಯೋಜನೆಗೆ ಸೇರುವ ಆಯ್ಕೆ

ಅಸ್ತಿತ್ವದಲ್ಲಿರುವ ಎನ್‌ಪಿಎಸ್, ವಿಆರ್‌ಎಸ್ ಜೊತೆಗೆ ಎನ್‌ಪಿಎಸ್ ಜೊತೆಗೆ ಭವಿಷ್ಯದ ಉದ್ಯೋಗಿಗಳು ಯುಪಿಎಸ್‌ಗೆ ಸೇರುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಆಯ್ಕೆಯನ್ನು ಒಮ್ಮೆ ಮಾಡಿಕೊಂಡರೆ ಅದೇ ಅಂತಿಮವಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಯುಪಿಎಸ್ ಅನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ರಾಜ್ಯ ಸರ್ಕಾರಗಳೂ ಅಳವಡಿಸಿಕೊಳ್ಳಬಹುದಾಗಿದೆ. ಆದರೆ ಕೇಂದ್ರದಂತೆ ರಾಜ್ಯ ಸರ್ಕಾರವೂ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ3 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು4 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು4 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು7 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು8 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ8 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್9 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ9 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ16 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌