ಬೆಂಗಳೂರು: ಪದವಿ ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಂಡಿದ್ದೀರಾ? ಹೌದು ಎಂದಾದರೆ ಇಲ್ಲಿದೆ ಸುವರ್ಣಾವಕಾಶ. ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ (South Canara District Central Co-operative Bank Ltd.) ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SCDCC Bank Recruitment Notification 2024). ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18 (Job Alert).
ಹುದ್ದೆಗಳ ವಿವರ
ಸಾಮಾನ್ಯ ವರ್ಗ: 62, ಪರಿಶಿಷ್ಟ ಜಾತಿ: 18, ಪರಿಶಿಷ್ಟ ಪಂಗಡ: 4, ಪ್ರವರ್ಗ 1: 5, ಪ್ರವರ್ಗ 2 ಎ: 18, ಪ್ರವರ್ಗ 2 ಬಿ: 5, ಪ್ರವರ್ಗ 3 ಎ: 5, ಪ್ರವರ್ಗ 3 ಬಿ: 6 ಹುದ್ದೆಗಳಿವೆ.
ವಿದ್ಯಾರ್ಹತೆ ಮತ್ತು ಮಾಸಿಕ ವೇತನ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜತೆಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನದೊಂದಿಗೆ ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮಾ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೆಟ್ ಹೊಂದಿರಬೇಕು. ಕಂಪ್ಯೂಟರ್ ಸೈನ್ ಪದವಿ ಪಡೆದ ಅಭ್ಯರ್ಥಿಗಳಿಗೆ ಈ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಆಯ್ಕೆಯಾದವರಿಗೆ 24,910 ರೂ. – 55,655 ರೂ. ಮಾಸಿಕ ವೇತನ ಜತೆಗೆ ಡಿಎ & ಎಚ್.ಆರ್.ಎ. ಮುಂತಾದ ಸೌಲಭ್ಯ ದೊರೆಯಲಿದೆ.
ಅರ್ಜಿ ಶುಲ್ಕ ಮತ್ತು ವಯೋಮಿತಿ
ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 1,180 ರೂ. ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಕೆ1 ಸೇರಿದ ಅಭ್ಯರ್ಥಿಗಳು 590 ರೂ. ಪಾವತಿಸಬೇಕು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ಸಹಕಾರಿ ವಿಷಯ / ಬ್ಯಾಂಕಿಂಗ್ ಕ್ಷೇತ್ರದ ಬಗ್ಗೆ, ಭಾರತದ ಸಂವಿಧಾನ, ಸಮಾಜದ ಯುಕ್ತವಾದ ಚಟುವಟಿಕೆ ಮತ್ತು ವಸ್ತುನಿಷ್ಟ ವಿಷಯಗಳ ಪ್ರಶ್ನೆಗಳಿರುತ್ತವೆ.
SCDCC Bank Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ (https://scdccbank.com/recruitment/addi-notification.pdf)
ಅಲ್ಲಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://scdccbank.com/recruitment/)
- ಅಪ್ಲಿಕೇಷನ್ ಫಾರಂ ಭರ್ತಿ ಮಾಡಿದ ಬಳಿಕ ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 18ರೊಳಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ:
The Chief Executive Officer,
The South Canara District Central Cooperative Bank Ltd., Kodialbail,
Mangalore – 575 003
ಹೆಚ್ಚಿನ ಮಾಹಿತಿಗೆ: (0824) – 2440381, 2440882 ನಂಬರ್‌ಗೆ ಕರೆ ಮಾಡಿ.
ಇದನ್ನೂ ಓದಿ: Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?