ಬೆಂಗಳೂರು: ಶಿವಮೊಗ್ಗ ಜಿಲ್ಲಾ ಕೋರ್ಟ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (Shivamogga District Court Recruitment 2024). ಸುಮಾರು 33 ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ 2024ರ ಜನವರಿ 16 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಆಯ್ಕೆಯಾದವರಿಗೆ ಶಿವಮೊಗ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಪ್ರೊಸೆಸ್ ಸರ್ವರ್- 5 ಮತ್ತು ಪಿಯೋನ್- 28 ಹುದ್ದೆಗಳಿವೆ. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ/ ಕ್ಯಾಟಗರಿ-I ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ / ಕ್ಯಾಟಗರಿ-I / ಪಿಎಚ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ., ಸಾಮಾನ್ಯ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯ.
ಆಯ್ಕೆ ವಿಧಾನ ಮತ್ತು ವೇತನ
ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19,950 ರೂ.- 37,900 ರೂ. (ಪ್ರೊಸೆಸ್ ಸರ್ವರ್) ಮತ್ತು 17,000-28,950 (ಪಿಯೋನ್) ಮಾಸಿಕ ವೇತನ ಲಭಿಸಲಿದೆ.
ಪಿಯೋನ್ ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪ್ರೊಸೆಸ್ ಸರ್ವರ್ ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅಧಿಸೂಚನೆಯನ್ನು ಗಮನಿಸಿ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಿ.
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೈಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಸಿದ್ಧವಾಗಿರಿಸಿಕೊಳ್ಳಿ.
- ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಪ್ರೊಸೆಸ್ ಸರ್ವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಸರಿಯಾದ ಮಾಹಿತಿ ನೀಡಿ ಅರ್ಜಿ ತುಂಬಿಸಿ. ಅಗತ್ಯವಾದ ಡಾಕ್ಯುಮೆಂಟ್, ಫೋಟೊ ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ
- Submit ಬಟನ್ ಕ್ಲಿಕ್ ಮಾಡಿ
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ನಂಬರ್ ಮತ್ತು ರಿಕ್ವೆಸ್ಟ್ ನಂಬರ್ ತೆಗೆದಿರಿಸಿ.
ಇದನ್ನೂ ಓದಿ: Job Alert: ಅಪ್ರೆಂಟಿಸ್ ಟ್ರೈನಿಂಗ್; ಬೆಸ್ಕಾಂನಲ್ಲಿ 400 ಮಂದಿಗೆ ಅವಕಾಶ; ಇಂದೇ ಅರ್ಜಿ ಸಲ್ಲಿಸಿ