ಬೆಂಗಳೂರು: ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (Small Industries Development Bank of India-SIDBI) ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ (SIDBI Grade A Recruitment 2023). ಖಾಲಿ ಇರುವ 50 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪದವಿ ಓದಿದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಸಕ್ತರು ನವೆಂಬರ್ 28ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ (Job Alert).
ಶೈಕ್ಷಣಿಕ ಅರ್ಹತೆ
ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ಎ) ಹುದ್ದೆ ಇದಾಗಿದ್ದು, ಭಾರತ ಸರ್ಕಾರ/ ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳು/ ಸಂಸ್ಥೆಗಳಿಂದ ಕನಿಷ್ಠ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಎಸ್ಸಿ / ಎಸ್ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 55% ಅಂಕ ಪಡೆದಿರಬೇಕು.
ವಯೋಮಿತಿ ಮತ್ತು ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವವರ ವಯಸ್ಸು 30 ವರ್ಷ ಮೀರಿರಬಾರದು. ಗುಂಪು ಚರ್ಚೆ, ಸಂದರ್ಶನ ಮತ್ತು ಸೈಕೋಮೆಟ್ರಿಕ್ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುಂಪು ಚರ್ಚೆ, ಸಂದರ್ಶನ ಡಿಸೆಂಬರ್ ಅಥವಾ 2024ರ ಜನವರಿಯಲ್ಲಿ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಗುಂಪು ಚರ್ಚೆ ಮತ್ತು ಸಂದರ್ಶನಕ್ಕೆ ಗರಿಷ್ಠ ಅಂಕಗಳು ತಲಾ 100. ಈ ಎರಡು ಪ್ರಕ್ರಿಯೆಗಳಲ್ಲಿ ಅಭ್ಯರ್ಥಿಗಳು ಗಳಿಸಿದ ಸಂಯೋಜಿತ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ. ಗುಂಪು ಚರ್ಚೆ ಮತ್ತು ಸಂದರ್ಶನವು ಲಕ್ನೋ, ಮುಂಬೈ, ನವದೆಹಲಿ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರ: ಕರ್ನಾಟಕದಲ್ಲಿ ಬೆಂಗಳೂರು.
ಅರ್ಜಿ ಶುಲ್ಕ
ಜನರಲ್/ ಒಬಿಸಿ/ ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,100 ರೂ. ಪಾವತಿಸಬೇಕು. ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳ ಅರ್ಜಿ ಶುಲ್ಕ 175 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು. ಮಾಸಿಕ ವೇತನ 90,000 ರೂ.
ಇದನ್ನೂ ಓದಿ: Job News: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿದೆ 66 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ
ಅರ್ಜಿ ಸಲ್ಲಿಸುವ ವಿಧಾನ
- SIDBI Grade A Recruitment 2023 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಹೋಮ್ಪೇಜ್ನ ಮೇಲ್ಗಡೆ ಕಾಣಿಸುವ ಕಾಣಿಸುವ “Careers” ಆಯ್ಕೆ ಮೇಲೆ ಕ್ಲಿಕ್ ಮಾಡಿ. ಆಗ ಹೊಸ ಪೇಜ್ ಓಪನ್ ಆಗುತ್ತದೆ.
- ಅಲ್ಲಿ “Apply for Assistant Manager ‘Grade-A’ in General Stream” ಆಯ್ಕೆಯನ್ನು ಕ್ಲಿಕ್ ಮಾಡಿ
- ಬಳಿಕ “Click here to apply online” ಅನ್ನು ಸೆಲೆಕ್ಟ್ ಮಾಡಿ
- ಈಗ ಅಭ್ಯರ್ಥಿಗಳು ಅರ್ಜಿ ಪ್ರಕ್ರಿಯೆಗೆ ನೋಂದಾಯಿಸಿಕೊಳ್ಳಬೇಕು. ಅದಕ್ಕಾಗಿ “Click here for new registration” ಟ್ಯಾಬ್ ಅನ್ನು ಆಯ್ಕೆ ಮಾಡಿ, ಹೆಸರು, ಸಂಪರ್ಕ ವಿವರಗಳು ಮತ್ತು ಇಮೇಲ್-ಐಡಿಯನ್ನು ನಮೂದಿಸಿ
- ತಾತ್ಕಾಲಿಕ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ರಚನೆಯಾಗುತ್ತದೆ. ಅದನ್ನು ನೋಟ್ ಮಾಡಿಟ್ಟುಕೊಳ್ಳಿ
- ಈಗ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ನೊಂದಿಗೆ ಲಾಗಿನ್ ಆಗಿ ಮತ್ತು ಅಗತ್ಯ ವಿವರಗಳನ್ನು ಭರ್ತಿ ಮಾಡಿ
- ಅಗತ್ಯವಾದ ಡಾಕ್ಯುಮೆಂಟ್, ಫೋಟೊ ಅಪ್ಲೋಡ್ ಮಾಡಿ
- ಆನ್‌ಲೈನ್ ಮೂಲಕ ಫೀಸ್ ತುಂಬಿ ಅರ್ಜಿ ಸಲ್ಲಿಸಿ
ಅಧಿಚೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ