ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್ ಡಿವಿಷನ್ ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಲೋವರ್ ಡಿವಿಷನ್ ಕ್ಲರ್ಕ್ (LDC) / ಜೂನಿಯರ್ ಸೆಕ್ರೆಟೆರಿಯೇಟ್ ಅಸಿಸ್ಟಂಟ್ (JSA), ಡೇಟಾ ಎಂಟ್ರಿ ಆಪರೇಟರ್ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ / ಟೈಪಿಂಗ್ ಟೆಸ್ಟ್, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
- ನಿಮಗೆ ಬಂದಿರುವ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಾಣಿಸುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್ ಕ್ಲಿಕ್ ಮಾಡಿ.
- ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್, ಎಸ್ಎಂಎಸ್ ಮೂಲಕ ಸಂದೇಶ ಬರಲಿದೆ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂನ ಪಿಂಟ್ಔಟ್ ತೆಗೆದಿಡಿ.
ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್ ಮೂಲಕ ಇಂದೇ ಅರ್ಜಿ ಸಲ್ಲಿಸಿ