Site icon Vistara News

Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಖಾಲಿ ಇರುವ 4,187 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ssc

ssc

ಬೆಂಗಳೂರು: ಕೆಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (The Staff Selection Commission) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ಭಾರತಾದ್ಯಂತ ಖಾಲಿ ಇರುವ ಬರೋಬ್ಬರಿ 4,187 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ್‌ 28 (Job Alert).

ಹುದ್ದೆಗಳ ವಿವರ

ದೆಹಲಿ ಪೊಲೀಸ್‌ ಎಸ್‌ಐ (ಪುರುಷರು)-125, ದೆಹಲಿ ಪೊಲೀಸ್‌ ಎಸ್‌ಐ (ಮಹಿಳೆಯರು)-61, ಬಿಎಸ್‌ಎಫ್‌-892, ಸಿಐಎಸ್‌ಎಫ್‌-1,597, ಸಿಆರ್‌ಪಿಎಫ್‌-1,172, ಐಟಿಬಿಪಿ-278, ಎಸ್‌ಎಸ್‌ಬಿ-62 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಎಸ್‌ಎಸ್‌ಸಿಯ ಈ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾನಿಯದಿಂದ ಪದವಿ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ ವರ್ಗ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ವಿಧಾನವನ್ನೇ ಬಳಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಿಬಿಟಿ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PET), ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 35,400 ರೂ. – 1,12,400 ರೂ. ಮಾಸಿಕ ವೇತನ ಲಭಿಸಲಿದೆ. ಮೊದಲ ಪರೀಕ್ಷೆ 2024ರ ಮೇ 9, 10, 13ರಂದು ನಡೆಯಲಿದೆ.

SSC Recruitment 202 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿಯಲ್ಲಿದೆ 277 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Exit mobile version