Site icon Vistara News

Job Alert: 75,768 ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ನವೆಂಬರ್‌ 24ರಿಂದ ಅರ್ಜಿ ಸಲ್ಲಿಸಿ!

cons

cons

ಬೆಂಗಳೂರು: ಉದ್ಯೋಗ ಹುಡುಕುತ್ತಿರುವವರಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission- SSC) ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಬರೋಬ್ಬರಿ 75,768 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಕಾನ್‌ಸ್ಟೇಬಲ್‌ (General Duty-GD) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು (SSC GD Constable 2023 Recruitment). ನವೆಂಬರ್‌ 24ರಿಂದ ನೋಂದಣಿ ನಡೆಯಲಿದೆ. ಡಿಸೆಂಬರ್‌ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ

ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF)-ಪುರುಷರು: 24,806, ಮಹಿಳೆಯರು: 3,069
ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF)-ಪುರುಷರು: 7,877, ಮಹಿಳೆಯರು: 721
ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF)-ಪುರುಷರು: 22,196, ಮಹಿಳೆಯರು: 3,231
ಶಸ್ತ್ರ ಸೀಮಾ ಬಲ್‌ (SSB)-ಪುರುಷರು: 4,839, ಮಹಿಳೆಯರು: 439
ಇಂಡೋ-ಟಿಬೆಟನ್‌ ಬಾರ್ಡರ್‌ ಪೊಲೀಸ್‌ (ITBP)-ಪುರುಷರು: 2,564, ಮಹಿಳೆಯರು: 442
ರೈಫಲ್‌ಮ್ಯಾನ್‌ (ಜನರಲ್‌ ಡ್ಯೂಟಿ) ಇನ್‌ ಅಸ್ಸಾಂ ರೈಫಲ್ಸ್‌ (AR)-ಪುರುಷರು: 4,624, ಮಹಿಳೆಯರು: 152
ಸೆಕ್ರಟ್ರಿಯೇಟ್‌ ಸೆಕ್ಯುರಿಟಿ ಫೋರ್ಸ್‌ (SSF)-ಪುರುಷರು: 458, ಮಹಿಳೆಯರು: 125
ನ್ಯಾಷನಲ್‌ ಇನ್‌ವೆಸ್ಟಿಗೇಷನ್‌ ಏಜೆನ್ಸಿ (NIA)-ಪುರುಷರು: 125.
ಹೀಗೆ ಪುರುಷರಿಗೆ 67,489 ಮತ್ತು ಮಹಿಳೆಯರಿಗೆ 8,179 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ / 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು: 18 ವರ್ಷ ಮತ್ತು ಗರಿಷ್ಠ ವಯಸ್ಸು: 23 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಸಾಮಾನ್ಯ / ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕಿದೆ. ನೆಟ್‌ ಬ್ಯಾಂಕಿಂಗ್, ಎಸ್‌ಬಿಐ ಚಲನ್, ಕ್ರೆಡಿಟ್ ಕಾರ್ಡ್‌, ಡೆಬಿಟ್‌ ಕಾರ್ಡ್‌ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಮಾನದಂಡ ಪರೀಕ್ಷೆ (PST), ವೈದ್ಯಕೀಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಎಸ್‌ಬಿಐಯಲ್ಲಿದೆ ಭರ್ಜರಿ 8,283 ಉದ್ಯೋಗಾವಕಾಶ; ಇಂದಿನಿಂದ ಅರ್ಜಿ ಸಲ್ಲಿಸಬಹುದು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Exit mobile version