Site icon Vistara News

Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Job Alert

Job Alert

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ನಿಮಗೆಂದೇ ಅವಕಾಶಗಳ ಹೆಬ್ಬಾಗಿಲೊಂದು ತೆರೆದಿದೆ. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 17,727 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಎಸ್‌ಎಸ್‌ಸಿ ಮುಂದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 24 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಸೆಕ್ಷನ್ ಆಫೀಸರ್, ಅಸಿಸ್ಟಂಟ್‌ / ಅಸಿಸ್ಟಂಟ್‌ ಸೆಕ್ಷನ್ ಆಫೀಸರ್, ಇನ್ಸ್‌ಪೆಕ್ಟರ್, ಅಸಿಸ್ಟಂಟ್‌ ಎನ್‌ಫೋರ್ಸ್‌ಮೆಂಟ್‌ ಆಫೀಸರ್‌, ಸಬ್ ಇನ್ಸ್‌ಪೆಕ್ಟರ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ರಿಸರ್ಚ್‌ ಅಸಿಸ್ಟಂಟ್‌,
ಡಿವಿಷನಲ್‌ ಅಕೌಂಟೆಂಟ್, ಸಬ್ ಇನ್ಸ್‌ಪೆಕ್ಟರ್ / ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್, ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್, ಅಡಿಟರ್‌, ಅಕೌಂಟೆಂಟ್, ಅಕೌಂಟೆಂಟ್ / ಜೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಅಪ್ಪರ್ ಡಿವಿಷನ್ ಕ್ಲರ್ಕ್, ಸೀನಿಯರ್‌ ಅಡ್ಮಿನಿಸ್ಟ್ರೇಷನ್‌ ಅಸಿಸ್ಟಂಟ್‌, ಟ್ಯಾಕ್ಸ್‌ ಅಸಿಸ್ಟಂಟ್‌ ಮುಂತಾದ ಹುದ್ದೆಗಳಿವೆ. ಅಧಿಸೂಚನೆ ಪ್ರಕಾರ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ, ಕಾನೂನು ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ / ಇಎಸ್‌ಎಂ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ) ವಿಭಾಗಕ್ಕೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ವಿಭಾಗಕ್ಕೆ 13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ವಿಭಾಗಕ್ಕೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಇಎಸ್‌ಎಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ (Computer Based Examination)-ಟೈರ್‌-I, ಟೈರ್‌-II, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲ ಪರೀಕ್ಷೆ ಸೆಪ್ಟೆಂಬರ್‌-ಅಕ್ಟೋಬರ್‌ ನಡುವೆ ಮತ್ತು ಎರಡನೇ ಪರೀಕ್ಷೆ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಹೆಚ್ಚಿನ ಮಾಹಿತಿಗಾಗಿ Help Desk (SSC-HQ) 1800 309 3063, SSC (KKR), Bengaluru 080 25502520, 09483862020 ನಂಬರ್‌ಗೆ ಕರೆ ಮಾಡಿ. ಅಥವಾ ಅಧಿಕೃತ ವೆಬ್‌ಸೈಟ್‌ ssc.gov.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

Exit mobile version