ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂ.ಟೆಕ್, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್, ಎಂ.ಟೆಕ್
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂ.ಟೆಕ್
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ಗರಿಷ್ಠ ವಯೋಮಿತಿ
ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ
ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಇಮೇಲ್, ಮೊಬೈಲ್ ನಂಬರ್ ಬಳಸಿ ಹೆಸರು ನಮೂದಿಸಿ.
- ಇಲ್ಲಿ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್ ಫಾರಂನ ಪ್ರಿಂಟ್ಔಟ್ ತೆಗೆದಿಡಿ.
ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.
ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ