ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್ 3 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸಾಮಾನ್ಯ ಅಭ್ಯರ್ಥಿ – 18, ಪರಿಶಿಷ್ಟ ಜಾತಿ – 7, ಪರಿಶಿಷ್ಟ ಪಂಗಡ – 4, ಪ್ರವರ್ಗ – 1- 2, ಪ್ರವರ್ಗ-2 (ಎ) -6, ಪ್ರವರ್ಗ-2 (ಬಿ)-2, ಪ್ರವರ್ಗ-3 (ಎ)-1, ಪ್ರವರ್ಗ-3 (ಬಿ)-1 ಹುದ್ದೆಗಳಿವೆ. ಅರ್ಜಿ ಸಲ್ಲಿಸುವವರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. ತತ್ಸಮಾನ ವಿದ್ಯಾರ್ಹತೆ: ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ ಮತ್ತು ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್.) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್. ಕರ್ನಾಟಕ ಪ್ರೌಢ ಶಿಕ್ಷಣ ಪ್ರೀಕ್ಷಾ ಮಂಡಳಿ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್ (ಕೆ.ಒ.ಎಸ್.).
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. 2 ಎ, 2 ಬಿ, 3 ಎ, 3 ಬಿ ವಿಭಾಗದವರಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ ವರ್ಗದವರು ಅರ್ಜಿ ಶುಲ್ಕವಾಗಿ 300 ರೂ., ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಇದಕ್ಕಾಗಿ ಕ್ರೆಡಿಟ್ / ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಸೌಲಭ್ಯ ಬಳಸಬಹುದು.
ಆಯ್ಕೆ ವಿಧಾನ
ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ. ಅದರಂತೆ 10ನೇ ತರಗತಿಯ ಗರಿಷ್ಠ ಅಂಕಗಳನ್ನು ಆಧರಿಸಿ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಆ ಪೈಕಿ ಅರ್ಹರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ