ಬೆಂಗಳೂರು: ಬ್ಯಾಂಕ್ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಗುರಿ. ಅದಕ್ಕಾಗಿ ಕಾಲೇಜು ದಿನಗಳಿಂದಲೇ ತಯಾರಿ ನಡೆಸುತ್ತಿರುತ್ತಾರೆ. ಇದೀಗ ಅಂತಹವರಿಗೊಂದು ಭರ್ಜರಿ ಗುಡ್‌ನ್ಯೂಸ್ ಹೊರ ಬಿದ್ದಿದೆ. ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್ (Union Bank of India) ಬರೋಬ್ಬರಿ 606 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚೀಫ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಸೇರಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (Union Bank of India Recruitment 2024). ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಫೆಬ್ರವರಿ 23 (Job Alert).
ಹುದ್ದೆಗಳ ವಿವರ ವಿದ್ಯಾರ್ಹತೆ
ಚೀಫ್ ಮ್ಯಾನೇಜರ್- 5, ಸೀನಿಯರ್ ಮ್ಯಾನೇಜರ್- 42, ಮ್ಯಾನೇಜರ್- 451 ಮತ್ತು ಅಸಿಸ್ಟಂಟ್ ಮ್ಯಾನೇಜರ್- 108 ಹುದ್ದೆಗಳಿವೆ. ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಬಿ.ಎಸ್‌ಸಿ / ಬಿ.ಇ. / ಬಿ.ಟೆಕ್ / ಎಂ.ಟೆಕ್ / ಎಂ.ಎಸ್‌ಸಿ / ಯಾವುದೇ ಪದವಿ / ಸಿಎ / ಎಂಬಿಎ / ಪಿಜಿಡಿಸಿಎ / ಪಿಜಿಡಿಬಿಎಂ / ಪಿಜಿಪಿಎಂ / ಪಿಜಿಡಿಎಂ ಪಡೆದವರು ಮತ್ತು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಲು ಹುದ್ದೆಗೆ ಅನುಗುಣವಾಗಿ ಕನಿಷ್ಠ ವಯಸ್ಸು 25 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ ಎಂದು ಪ್ರಕಟಣೆ ತಿಳಿಸಿದೆ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 850 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ
ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳ ತಪ್ಪು ಉತ್ತರಕ್ಕೆ ನೆಗೆಟಿವ್ ಅಂಕಗಳಿವೆ. ಹೀಗಾಗಿ ಎಚ್ಚರಿಕೆಯಿಂದ ಪರೀಕ್ಷೆ ಎದುರಿಸುವಂತೆ ಪ್ರಕಟಣೆ ತಿಳಿಸಿದೆ.
Union Bank of India Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಹೋಮ್ಪೇಜ್ನ ಕೆಳಗಡೆ ಕಾಣಿಸುವ Recruitment ಆಯ್ಕೆ ಮೇಲೆ ಕ್ಲಿಕ್ ಮಾಡಿ. ಬಳಿಕ Click Here to Apply ಬಟನ್ ಮೇಲೆ ಕ್ಲಿಕ್ ಮಾಡಿ.
- ವೈಯಕ್ತಿಕ ಮಾಹಿತಿ, ಮೊಬೈಲ್ ನಂಬರ್, ಇಮೇಲ್ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
- ಈಗ ಲಭಿಸುವ ಪಾಸ್ವರ್ಡ್ ಮತ್ತು ರಿಜಿಸ್ಟ್ರೇಷನ್ ನಂಬರ್ ಬಳಸಿ ಲಾಗಿನ್ ಆಗಿ.
- ಅಗತ್ಯ ಮಾಹಿತಿಗಳನ್ನು ತುಂಬಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯವಾದ ಡಾಕ್ಯುಮೆಂಟ್, ಫೋಟೊವನ್ನು ಸೂಕ್ತ ಗಾತ್ರದಲ್ಲಿ ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂನ ಪ್ರಿಂಟ್ಔಟ್ ತೆಗೆದಿಡಿ.
ಇದನ್ನೂ ಓದಿ: Job Alert: ಪದವಿ ಪೂರೈಸಿದವರಿಗೆ ಉದ್ಯೋಗಾವಕಾಶ; ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ