ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಇತ್ತೀಚೆಗೆ ಗುಡ್ ನ್ಯೂಸ್ ನೀಡಿತ್ತು. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಅದರಂತೆ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿತ್ತು. ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆಬ್ರವರಿ 20ರಂದು ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ ಈಗ ಈ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ತಿದ್ದುಪಡಿ ಮಾಡಿ ಹೊಸದಾಗಿ ಪ್ರಕಟಣೆ ಹೊರಡಿಸಲಾಗಿದೆ. ಈ ಕುರಿತಾದ ವಿವರ ಇಲ್ಲಿದೆ (Job Alert).
ಏನೆಲ್ಲ ತಿದ್ದುಪಡಿ?
ಸರ್ಕಾರದ ಪತ್ರ ಸಂಖ್ಯೆ: ಕಂಇ 240 ಬಿಎಸ್‌ಸಿ 2022 ದಿನಾಂಕ 13.03.2024ರಲ್ಲಿ ಸೂಚಿಸಿರುವಂತೆ ಕ್ರಮ ಸಂಖ್ಯೆ: 1ರ ಶೈಕ್ಷಣಿಕ ವಿದ್ಯಾರ್ಹತೆಯ ಕೊನೆಯ ಭಾಗವನ್ನು ತಿದ್ದುಪಡಿ ಮಾಡಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ
- ಗ್ರಾಮ ಆಡಳಿತ ಅಧಿಕಾರಿ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
- ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
- ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
- ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
- ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ)
- (ಐಟಿಐ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಎನ್ಐಒಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರ ಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಬಹುದು).
ವಿಶೇಷ ಸೂಚನೆ
ಸರ್ಕಾರದ ಆದೇಶ 19.02.2024ರಂತೆ ಒಬ್ಬ ಅಭ್ಯರ್ಥಿಯು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುವುದರಿಂದ, ಅಭ್ಯರ್ಥಿಗಳು ಒಂದೇ ಅರ್ಜಿಯಲ್ಲಿ ಕಲ್ಯಾಣ – ಕರ್ನಾಟಕ ಮತ್ತು ಉಳಿಕೆ ಮೂಲ ವೃಂದಕ್ಕೆ ಅರ್ಜಿ ಸಲ್ಲಿಸಿ ಆದ್ಯತೆಯನ್ನು ಸಹ ನಮೂದಿಸಬೇಕು. ಅದರಂತೆ ಕಲ್ಯಾಣ – ಕರ್ನಾಟಕ ಮತ್ತು ಉಳಿಕೆ ಮೂಲ ವೃಂದಕ್ಕೆ ಅಭ್ಯರ್ಥಿಗಳ ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಿಂದಿನ ಅಧಿಸೂಚನೆಯಲ್ಲಿ ಏನಿತ್ತು?
ಈ ಹಿಂದಿನ ಅಧಿಸೂಚನೆಯಲ್ಲಿ ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೀಗೆ ಸೂಚಿಸಲಾಗಿತ್ತು.
- ಗ್ರಾಮ ಆಡಳಿತ ಅಧಿಕಾರಿ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿ: 27.02.2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
- ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
- ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
- ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
- ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ) (ಅಭ್ಯರ್ಥಿಗಳು ಎನ್ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಬಹುದು.)
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: KPSC: ಗಮನಿಸಿ; ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ತಿದ್ದುಪಡಿ ಅಧಿಸೂಚನೆಯಲ್ಲಿ ಏನಿದೆ?