Site icon Vistara News

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Job News

Job News

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಶೀಘ್ರದಲ್ಲಿಯೇ ಈ ಕುರಿತಾದ ಅಧಿಸೂಚನೆ ಹೊರ ಬೀಳಲಿದೆ (Job News).

ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಜೂನ್‌ 3ರಂದು ಪ್ರಕಟಣೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅನೇಕ ಬೋಧಕ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ, ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ-ಇದರಲ್ಲಿ ಯಾವುದು ಮೊದಲೊ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಅತಿಥಿ ಶಿಕ್ಷಕರ ಹಾಜರಾತಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುವುದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 10 ಸಾವಿರ ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಅತಿಥಿ ಶಿಕ್ಷಕರು ನೇಮಕಗೊಂಡ ಸ್ಥಳಕ್ಕೆ ಮುಂದೆ ಖಾಯಂ ಶಿಕ್ಷಕರು ನಿಯುಕ್ತಿಗೊಂಡರೆ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಕೈ ಬಿಟ್ಟು, ತಾಲೂಕಿನಲ್ಲಿ ಖಾಲಿ ಇರುವ ಇತರ ಕಡೆಗೆ ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.

ಪ್ರಸ್ತುತ ಖಾಲಿ ಇರುವ 33,863 ಹುದ್ದೆಗಳಿಗೆ ಮೊದಲ ಹಂತದಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ತಾಲೂಕುವಾರು ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಯ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ.

ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ

ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ. ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Exit mobile version