Site icon Vistara News

Job News | ಸರ್ಕಾರದ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆ ಖಾಲಿ ಇವೆ?; ಇಲ್ಲಿದೆ ಸಂಪೂರ್ಣ ಮಾಹಿತಿ

karnataka govt jobs job news SC ST Reservation

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಶೇ.34 ರಷ್ಟು ಅಂದರೆ 2,58,709 ಹುದ್ದೆಗಳು ಖಾಲಿ ಇವೆ (Job News ) ಎಂದು ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್‌ನಲ್ಲಿ ಪ್ರಕಟಿಸಿದ್ದರು.

ಖಾಲಿ ಇರುವ ಹುದ್ದೆಗಳ ಪೈಕಿ ಅತ್ಯಗತ್ಯವಿರುವ ಸುಮಾರು 1 ಲಕ್ಷ ಹುದ್ದೆಗಳ ಭರ್ತಿಗೆ ಪ್ರಸಕ್ತ ವರ್ಷದಲ್ಲಿಯೇ ಕ್ರಮವಹಿಸಲಾಗುವುದು. ಈಗಾಗಲೇ 11 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿಯಾಗಿದೆ. 12 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ವಿಧಾನ ಪರಿಷತ್‌ ಸದಸ್ಯ ಸಿ ಎನ್ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಒಟ್ಟು 7,69,981 ಮಂಜೂರಾದ ಹುದ್ದೆಗಳಿವೆ. ಇದರಲ್ಲಿ 5,11,272 ಹುದ್ದೆಗಳಲ್ಲಿ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 2,58,709 ಹುದ್ದೆಗಳು ಖಾಲಿ ಇವೆ ಎಂದಿದ್ದರು.

ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ವಿವರವಾದ ಮಾಹಿತಿ ಇಲ್ಲಿದೆ;

ಇದನ್ನೂ ಓದಿ | Job Career | ಸರ್ಕಾರಿ ಉದ್ಯೋಗ ಪಡೆಯಲು ಈ ಎಲ್ಲ ಸಿದ್ಧತೆಗಳೂ ಬೇಕು!

Exit mobile version