ಬೆಂಗಳೂರು: ಸರ್ಕಾರಿ ಉದ್ಯೋಗದ (Job News) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅಭ್ಯರ್ಥಿಗಳ ಆಯ್ಕೆಗಾಗಿ ಕಳೆದ ನವೆಂಬರ್ 13 ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ಪರೀಕ್ಷೆ ನಡೆಸಿದ್ದು, ಒಟ್ಟು 76 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆದಿದ್ದರು. ಫಲಿತಾಂಶದ ಪಟ್ಟಿಯಲ್ಲಿ ಪರೀಕ್ಷೆ ಬರೆದವರ ಹೆಸರು, ರಿಜಿಸ್ಟೇಷನ್ ನಂಬರ್, ಜನ್ಮದಿನಾಂಕ ಮತ್ತು ಪಡೆದ ಅಂಕಗಳ ಮಾಹಿತಿಯನ್ನು ನೀಡಲಾಗಿದೆ. ಇಲಾಖಾವಾರು ಫಲಿತಾಂಶ ನೀಡಲಾಗಿದೆ.
ಫಲಿತಾಂಶ ನೋಡಲು ಭೇಟಿ ನೀಡಬೇಕಾದ ವೆಬ್‌ಸೈಟ್ ವಿಳಾಸ: Click Here for Result
ಮೊದಲ ಹಂತದಲ್ಲಿ 15 ಸಾವಿರ ಅಭ್ಯರ್ಥಿಗಳಿಗೆ ತರಬೇತಿ ಒದಗಿಸಲು ನಿರ್ಧರಿಸಲಾಗಿದ್ದು, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ತರಬೇತಿ ನೀಡಲಾಗುತ್ತದೆ. ಕಳೆದ ಜುಲೈನಲ್ಲಿ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿತ್ತು.
ಕೇಂದ್ರಲೋಕ ಸೇವಾ ಆಯೋಗ (ಯುಪಿಎಸ್‌ಸಿ), ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ), ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್), ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ರೈಲ್ವೇ ನೇಮಕಾತಿ ಮಂಡಳಿ (ಆರ್‌ಆರ್‌ಬಿ), ಗ್ರೂಪ್ ಸಿ ಹುದ್ದೆಗಳ ನೇಮಕ, ನ್ಯಾಯಾಲಯಗಳ ನೇಮಕ ಮತ್ತು ಏರ್ ಹೊಸ್ಟ್ರೇಸ್ ನೇಮಕಕ್ಕೆ ಸಂಬಂಧಿಸಿದಂತೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಈ ಯೋಜನೆ ಮೂಲಕ ಧನಸಹಾಯ ನೀಡಲಾಗುತ್ತದೆ. ಜತೆಗೆ ಮಾಸಿಕ ಶಿಷ್ಯವೇತನವನ್ನೂ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆಗಳು ಇಂತಿವೆ: ಸಮಾಜ ಕಲ್ಯಾಣ ಇಲಾಖೆ: 9482300400 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: 8050770004 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: 8277799990.
ಇದನ್ನೂ ಓದಿ | Job News | ಸರ್ಕಾರದ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆ ಖಾಲಿ ಇವೆ?; ಇಲ್ಲಿದೆ ಸಂಪೂರ್ಣ ಮಾಹಿತಿ