Site icon Vistara News

Job News | ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಸಿಬ್ಬಂದಿ ನೇಮಕಾತಿ ಆಯೋಗ

ssc exam date 2022

ಬೆಂಗಳೂರು: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆ, ಸಂಸ್ಥೆ, ಅರೆಸೇನಾಪಡೆಗಳಲ್ಲಿನ ಗ್ರೂಪ್‌-ಬಿ, ಗ್ರೂಪ್‌-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕ ಮಾಡುವ ‘ಸಿಬ್ಬಂದಿ ನೇಮಕಾತಿ ಆಯೋಗ’ (Staff Selection Commission-SSC) ೨೦೨೨-೨೩ನೇ ಸಾಲಿನಲ್ಲಿ ನಡೆಸಲಿರುವ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಸಚಿವಾಲಯ, ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅರ್ಜಿ ಆಹ್ವಾನಿಸುವ ಎಸ್‌ಎಸ್‌ಸಿಯು, ವಿವಿಧ ಹಂತದ ಪರೀಕ್ಷೆ ಸೇರಿದಂತೆ ನೇಮಕ ಪ್ರಕ್ರಿಯೆ ನಡೆಸುತ್ತದೆ. ನಿಗದಿತವಾಗಿ ಕೆಲವು ಹುದ್ದೆಗಳಿಗೆ ಪ್ರತಿ ವರ್ಷ ಪರೀಕ್ಷೆ ನಡೆಸಿಕೊಂಡು ಬರಲಾಗುತ್ತಿದೆ.

ವಾರ್ಷಿಕ ಸುಮಾರು 15 ರಿಂದ 20 ಪರೀಕ್ಷೆಗಳನ್ನು ಸಾಮಾನ್ಯವಾಗಿ ಎಸ್‌ಎಸ್‌ಸಿ ನಡೆಸಿಕೊಂಡು ಬಂದಿದೆ. ಕೇಂದ್ರ ಲೋಕಸೇವಾ ಆಯೋಗ (UPSC)ದಂತೆ ಎಸ್‌ಎಸ್‌ಸಿ(SSC)ಯು ಮೊದಲೇ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸುತ್ತದೆ. ಈಗಾಗಲೇ ಎಸ್‌ಎಸ್‌ಸಿಯು ವೇಳಾಪಟ್ಟಿ ಪ್ರಕಟಿಸಿತ್ತು. ಅದನ್ನೀಗ ಪರಿಷ್ಕರಿಸಿದೆ.

ಮುಂದಿನ 18 ತಿಂಗಳಿನಲ್ಲಿ ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಇತ್ತೀಚೆಗೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಸಿಯ ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದು ಬಹಳ ಮಹತ್ವ ಪಡೆದಿದೆ. ೧೦ ಲಕ್ಷ ಹುದ್ದೆಗಳಲ್ಲಿ ಶೇ. ೫೦ರಷ್ಟು ಹುದ್ದೆಗಳು ಎಸ್‌ಎಸ್‌ಸಿ ಮೂಲಕವೇ ನಡೆಯುವ ಸಾಧ್ಯತೆ ಇದೆ. ಇತ್ತೀಚೆಗೆ ಎಸ್‌ಎಸ್‌ಸಿಯು ಸದ್ಯವೇ ೭೦ ಸಾವಿರ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಸುವುದಾಗಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಪರಿಷ್ಕೃತ ವೇಳಾಪಟ್ಟಿ ಹೀಗಿದೆ;

ಈ ವೇಳಾಪಟ್ಟಿಯಲ್ಲಿ ನೀವು ಗಮನಿಸಬೇಕಾದ ಪ್ರಮುಖ ದಿನಾಂಕಗಳಿವು;

ಹೆಚ್ಚಿನ ಮಾಹಿತಿಗೆ ವೆಬ್‌: https://www.ssc.nic.in

ಇದನ್ನೂ ಓದಿ | Job News | ಕೇಂದ್ರ ಸರ್ಕಾರಿ ನೌಕರಿಗೆ SSC ಪರೀಕ್ಷೆ ಬರೆಯಿರಿ

Exit mobile version