ಬೆಂಗಳೂರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಬೆಂಗಳೂರು (bengaluru) ಮೆಟ್ರೋ ರೈಲು (metro train) ಕಾರ್ಪೋರೇಷನ್ ಲಿಮಿಟೆಡ್ (Bengaluru Metro Rail Corporation Limited) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಕುರಿತು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ bmrc.co.in ಅಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆಯ ವಿವರ
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನ ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000- 82,660 ರೂ. ಸಂಬಳ ನೀಡಲಾಗುತ್ತದೆ.
ಅರ್ಹತೆ ಏನು?
ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ
ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸೈಕೋಮೆಟ್ರಿಕ್ ಟೆಸ್ಟ್ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಪ್ರಕ್ರಿಯೆ
ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.