ಬೆಂಗಳೂರು: ನಗರದ ಜಯನಗರದಲ್ಲಿ ಜೂನ್ 5 ರಂದು ಬೃಹತ್ ಉದ್ಯೋಗ ಮೇಳ (Job Fair) ನಡೆಯಲಿದ್ದು, ಅಮೇಜಾನ್, ಫ್ಲಿಪ್‌ಕಾರ್ಟ್, ಓಲಾ, ಎಂಐ, ಜಿಯೋ ಸೇರಿದಂತೆ 30 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿವೆ. ಎಸ್‌ಎಸ್‌ಎಲ್‌ಸಿ ಯಿಂದ ಎಂಟೆಕ್‌ನವರೆಗೆ ಓದಿದ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ.
ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿರುವ ಬಿಇಎಸ್ ಕಾಲೇಜಿನ ಆವರಣದಲ್ಲಿ ಈ ಮೇಳ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಆರಂಭಗೊಳ್ಳಲಿದೆ. ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳೊಂದಿಗೆ ಆಗಮಿಸಿ, ತಮಗೆ ಸೂಕ್ತವಾದ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಈ ಮೇಳದ ಆಯೋಜಕರಾಗಿರುವ ಸ್ಥಳೀಯ ಶಾಸಕಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.
ಸೇಲ್ಸ್, ಪ್ಯಾಕರ್, ಸಾಫ್ಟ್‌ವೇರ್, ಬ್ಯಾಂಕಿಂಗ್, ಐಟಿ, ಕಾಲ್ ಸೆಂಟರ್, ಕಸ್ಟಮರ್ ಸಪೋರ್ಟ್, ಬ್ರ್ಯಾಂಚ್ ಮ್ಯಾನೇಜರ್, ರಿಲೇಷನ್ ಶಿಪ್ ಮ್ಯಾನೇಜರ್ ಹೀಗೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಬಿಇ, ಎಂಟೆಕ್ ಓದಿದ ಯುವಕರು, ಯುವತಿಯರು, ಅನುಭವ ಹೊಂದಿದವರು, ಕೆಲಸ ಬಿಟ್ಟಿದ್ದ ಮಹಿಳೆಯರು ಈ ಮೇಳದ ಪ್ರಯೋಜನ ಪಡೆಯಬಹುದಾಗಿದೆ.
ಇದನ್ನೂ ಓದಿ | Job News: ಚಿನ್ನದ ಕಂಪನಿಯಲ್ಲಿ ಬಂಗಾರದಂತಹ ಕೆಲಸ!
ಉದ್ಯೋಗ ಹುಡುಕಾಟದಲ್ಲಿರುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಮೊಬೈಲ್ ನಂ. 92416699999 ಸಂಪರ್ಕಿಸಬಹುದಾಗಿದೆ ಎಂದು ಸೌಮ್ಯಾ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.