ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿನ 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳ (Junior Veterinary Examiner 2022) ನೇಮಕಕ್ಕೆ ಸಂಬಂಧಿಸಿದಂತೆ ಜನವರಿ 2೨ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕ ಪ್ರಕ್ರಿಯೆ ನಡೆಸುತ್ತಿದ್ದು, ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಅಗತ್ಯ ಇರುವ ಅಭ್ಯರ್ಥಿಗಳಿಗೆ ಜನವರಿ 28ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ.
ಈ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದ್ದು, 100 ಅಂಕ ನಿಗದಿಪಡಿಸಲಾಗಿರುತ್ತದೆ. ನೂರು ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗಿರುತ್ತದೆ. ಪರೀಕ್ಷೆಯ ಪಠ್ಯಕ್ರಮವನ್ನು ಈಗಾಗಲೇ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಂತಿಮ ವೇಳಾಪಟ್ಟಿ ಮತ್ತು ಪ್ರವೇಶ ಪತ್ರವನ್ನು ಮುಂದೆ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
ಈ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗೆ ಲಿಂಕ್| https://cetonline.karnataka.gov.in/kea/kahvs
ಇದನ್ನೂ ಓದಿ| KPSC Recruitment 2022 | ಜೂನಿಯರ್ ಎಂಜಿನಿಯರ್ ನೇಮಕಕ್ಕೆ ಪರೀಕ್ಷೆ; ಪ್ರವೇಶ ಪತ್ರ ಬಿಡುಗಡೆ