ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ (Junior Veterinary Examiner 2022) ಅರ್ಜಿ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ವಿಸ್ತರಿಸಲಾಗಿದೆ.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕ ಪ್ರಕ್ರಿಯೆ ನಡೆಸುತ್ತಿದ್ದು, ಅಕ್ಟೋಬರ್ 05 ರಿಂದ ನವೆಂಬರ್ 4 ರವರೆಗೆ ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈಗ ಅಭ್ಯರ್ಥಿಗಳು 26-11-2022 ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು 28.11.2022 ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಪ್ರಾಧಿಕಾರವು ಕೋರಿದೆ.
ಯಾರು ಅರ್ಜಿ ಸಲ್ಲಿಸಬಹುದು?
ಅಭ್ಯರ್ಥಿಯು ಬೀದರ್‌ನಲ್ಲಿರುವ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಪಶು ಆರೋಗ್ಯ(ಪಶುಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆಯು ನಡೆಸುವ ಡೈರಿ/ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ (ಜೆಒಸಿ ಇನ್‌ಡೈರಿ/ಕುಕ್ಕುಟ(ಪೌಲ್ಟ್ರಿ) ನಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನದೊಳಗೆ ಈ ಎಲ್ಲ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಹುದ್ದೆಗಳ ಮೀಸಲಾತಿ ಹಂಚಿಕೆ ಇಂತಿದೆ:
ವಯೋಮಿತಿ ಎಷ್ಟು?
ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ಅಭ್ಯರ್ಥಿಗೆ ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ- 2ಎ, 2ಬಿ, 3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 500ರೂ. ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಚಲನ್ ಪಡೆದು ಇ-ಅಂಚೆ ಕಚೇರಿ ಮೂಲಕ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗಿದೆ.
ನೇಮಕ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಪಡೆದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದ್ದು, 100 ಅಂಕ ನಿಗದಿಪಡಿಸಲಾಗಿರುತ್ತದೆ. ನೂರು ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗಿರುತ್ತದೆ. ಪರೀಕ್ಷೆಯ ಪಠ್ಯಕ್ರಮವನ್ನು ಈಗಾಗಲೇ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ವೇತನ ಎಷ್ಟಿರುತ್ತದೆ?
ವೇತನ ಶ್ರೇಣಿ : ರೂ.21,400-500-22,400-550-24,600-600-27,000-650-29,600-750-32,600-850-36,000-950-39,800-1,100-42,000
ಈ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗೆ ಲಿಂಕ್| https://cetonline.karnataka.gov.in/kea/kahvs
ಇದನ್ನೂ ಓದಿ| KPSC Recruitment 2022 | ಸರ್ಕಾರ ಇಲಾಖೆಗಳಲ್ಲಿ 700 ಹುದ್ದೆ; ಸದ್ಯವೇ ಕೆಪಿಎಸ್‌ಸಿ ಅಧಿಸೂಚನೆ