ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ (Karnataka Budget 2023) ಯುವಕರಿಗೆ ಹೊಸ ಯೋಜನೆಯಡಿ ತಲಾ 2000 ರೂಪಾಯಿಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲು ಮುಂದಾಗಿದೆ.
ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯುವ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ʻಯುವಸ್ನೇಹಿʼ ಎಂಬ ಹೊಸ ಯೋಜನೆಯಡಿ ತಲಾ 2000 ರೂಪಾಯಿಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಬದುಕುವ ದಾರಿ ಯೋಜನೆ
ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ ಮೂರು ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕವಾಗಿ 1,500 ರೂ.ಗಳ ಶಿಷ್ಯ ವೇತನವನ್ನು ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: Karnataka Budget 2023: 777 ಚಾರ್ಲಿ ಎಫೆಕ್ಟ್: ಬೀದಿ ನಾಯಿ ದತ್ತುಗೆ ಆನ್‌ಲೈನ್ ಪೋರ್ಟಲ್ ಘೋಷಿಸಿದ ಶ್ವಾನ ಪ್ರಿಯ ಸಿಎಂ
ಈ ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ.ಗಳ ಶಿಶಿಕ್ಷು ಭತ್ಯೆಯನ್ನೂ ನೀಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.