Site icon Vistara News

KARTET Result 2023: ಟಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

TET 2023 exam

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2023ರ (ಟಿಇಟಿ) (KARTET Result 2023) ಫಲಿತಾಂಶವನ್ನು ಪ್ರಕಟಿಸಿದೆ. ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸಬಹುದು.

ಸೆ.3ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2023 ನಡೆದಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಜುಲೈ 14 ರಿಂದ ಆಗಸ್ಟ್‌ 15ರವರೆಗೆ ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ಅರ್ಜಿಸಂಖ್ಯೆ ಮತ್ತು ಅಭ್ಯರ್ಥಿಯ ಜನ್ಮದಿನಾಂಕ (ಆನ್‌ಲೈನ್‌ ಅರ್ಜಿಯಲ್ಲಿರುವಂತೆ) ನಮೂದಿಸಿ ಫಲಿತಾಂಶ ವೀಕ್ಷಿಸುವುದಷ್ಟೇ ಅಲ್ಲದೇ ಶಿಕ್ಷಣ ಇಲಾಖೆಯ ವೆವ್‌ಸೈಟ್‌ನಲ್ಲಿ (www.schooleducation.kar.nic.in) ಗಣಕೀಕೃತ ಪ್ರಮಾಣಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಈ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ.

(ಟಿಇಟಿ-2023 ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ)

ಇದನ್ನೂ ಓದಿ | Job Alert: ಎಸ್‌ಬಿಐಯ 5,280 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಅರ್ಹತಾ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ಬದಲಿಗೆ QR Code ದತ್ತಾಂಶವನ್ನು ಹೊಂದಿರುವ ಗಣಕೀಕೃತ ಅಂಕಪಟ್ಟಿ ವಿತರಿಸಲಾಗುತ್ತದೆ. ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್‌ ಮೂಲಕ ಸುರಕ್ಷತಾ ಕೋಡ್‌ (QR Code) ಹೊಂದಿರುವ ಗಣಕೀಕೃತ ಪ್ರಮಾಣಪತ್ರವನ್ನು ಪಡೆದುಕೊಳ್ಳಬಹುದಾಗಿದೆ. ಈ ಪ್ರಮಾಣ ಪತ್ರವು ಸೀಮಿತ ದಿನಗಳವರೆಗೆ ಮಾತ್ರ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದ್ದು, ಅಭ್ಯರ್ಥಿಗಳು ಸಾಕಷ್ಟು. ಸಂಖ್ಯೆಯ ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ತಮ್ಮಲ್ಲಿ ಇಟ್ಟುಕೊಳ್ಳಬಹುದು.

ರಾಜ್ಯದ 35 ಶೈಕ್ಷಣಿಕ ಜಿಲ್ಲಾ ಕೇಂದ್ರದಲ್ಲಿ ಸೆ.3ರಂದು ಟಿಇಟಿ ನಡೆಸಲಾಗಿತ್ತು. 1 ರಿಂದ 5ನೇ ತರಗತಿವರೆಗೆ ಬೋಧಿಸುವ ಶಿಕ್ಷಕರ ಹುದ್ದೆಗಳಿಗೆ (ಪತ್ರಿಕೆ-1) 1,43,705 ರಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದವು, 544 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇನ್ನು 6 ರಿಂದ 8 ನೇ ತರಗತಿ ಬೋಧಿಸುವ ಶಿಕ್ಷಕರ ಹುದ್ದೆಗೆ (ಪತ್ರಿಕೆ-2) 1,89,994 ಅರ್ಜಿ ಸಲ್ಲಿಕೆಯಾಗಿದ್ದವು, 711 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಎರಡು ಪತ್ರಿಕೆಗಳಿಗೆ ಒಟ್ಟು 3.33 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಪತ್ರಿಕೆ-1ಕ್ಕೆ ನೋಂದಾಯಿಸಿಕೊಂಡವರಲ್ಲಿ 1,24,130 (ಶೇ.88.45), ಪತ್ರಿಕೆ-2ರ ಪರೀಕ್ಷೆಗೆ 1,74,834 (ಶೇ.92.01) ಅಭ್ಯರ್ಥಿಗಳು ಹಾಜರಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version